Anna Bhagya Scheme DBT: ಅನ್ನಭಾಗ್ಯ ಯೋಜನೆಯ 1,020 ರೂ. ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ

ಎಲ್ಲರಿಗೂ ನಮಸ್ಕಾರ, ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme DBT) ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂದು (ಮಾರ್ಚ್ 26, 2025 ರಂದು) ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರ ಖಾತೆಗಳಿಗೆ ಅಕ್ಕಿ ಹಣ ಜಮಾ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆಯು 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಆರಂಭದಲ್ಲಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ಪೂರೈಕೆಯಲ್ಲಿ ತೊಡಕು ಉಂಟಾದ ಕಾರಣ, ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಿ, ಉಳಿದ 5 ಕೆಜಿಗೆ ಬದಲಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವ ನಿರ್ಧಾರ ಕೈಗೊಂಡಿತ್ತು.

Anna Bhagya Scheme DBT Amount Credited:

ಅನ್ನಭಾಗ್ಯ ಯೋಜನೆಯಡಿ (Anna Bhagya Scheme DBT) ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ, ಪ್ರತಿ ಸದಸ್ಯರಿಗೆ 5 ಕೆಜಿಗೆ 170 ರೂಪಾಯಿಗಳ ದರದಲ್ಲಿ ಈ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಆದಾಗ್ಯೂ, ಕೆಲವು ತಿಂಗಳುಗಳಿಂದ ಹಣ ವರ್ಗಾವಣೆಯಲ್ಲಿ ವಿಳಂಬವಾಗಿತ್ತು. ಇದರಿಂದ ಫಲಾನುಭವಿಗಳಲ್ಲಿ ಅಸಮಾಧಾನ ಮೂಡಿತ್ತು. ಈಗ ಸರ್ಕಾರವು ತನ್ನ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸಿದೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, “ಅನುದಾನದ ಕೊರತೆ ಇಲ್ಲ. ಮುಂದಿನ ತಿಂಗಳಿಂದ ಹಣದ ಬದಲು 10 ಕೆಜಿ ಅಕ್ಕಿ ವಿತರಣೆಗೆ ಯೋಜನೆ ರೂಪಿಸಲಾಗುತ್ತಿದೆ,” ಎಂದು ಹೇಳಿದ್ದರು, ಅದರಂತೆ ಫೆಬ್ರವರಿ ತಿಂಗಳಿಂದ BPL ಮತ್ತು ಅಂತ್ಯೋದಯ ಕಾರ್ಡ್‌ ಹೊಂದಿರುವ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.

ಹಿಂದೆ ಬಾಕಿ ಉಳಿದಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಜಮಾ ಮಾಡಲಾಗಿದ್ದು, ಫಲಾನುಭವಿಗಳು ತಮ್ಮ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದೇಯಾ ಎಂಬುದನ್ನು Anna Bhagya DBT Status ಚೆಕ್‌ ಮಾಡಿ ತಿಳಿದುಕೊಳ್ಳಬಹುದು.

ಸರ್ಕಾರ ಇತರೆ ಯೋಜನೆಗಳು:

Gruhalaxmi Amount Credit Date

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment