BCM Hostel Application 2025: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

BCM Hostel Application 2025: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಹ ವಿದ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಬಹುದು.

2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ:
ಪ್ರವರ್ಗ-1, ಹಾಗೂ SC/ST ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ: 2.50 ಲಕ್ಷ ರೂ ಮೀರಿರಬಾರದು.
ಪ್ರವರ್ಗ-2A, 2B, 3A, 3B, ಹಾಗೂ ಇತರೆ ಹಿಂದುಳಿದ ವರ್ಗ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ: 1ಲಕ್ಷ ರೂ ಮೀರಿರಬಾರದು.

BCM Hostel Application 2025 ಅಗತ್ಯ ದಾಖಲೆಗಳು:

  • ಮೊಬೈಲ್‌ ನಂಬರ್
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಹಿಂದಿನ ತರಗತಿಯ ಅಂಕ ಪಟ್ಟಿ
  • ವಿದ್ಯಾರ್ಥಿಯ SSP ಐಡಿ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ಪಾಸ್‌ಪೋರ್ಟ್ ಗಾತ್ರದ ಇತ್ತೀಚಿನ ಭಾವಚಿತ್ರ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-05-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-06-2025

ಪ್ರಮುಖ ಲಿಂಕ್‌ಗಳು:

  • ಅಧಿಸೂಚನೆ: ಡೌನ್‌ಲೋಡ್
  • ಅರ್ಜಿ ನಮೂನೆ: Apply ಮಾಡಿ
  • ಅಧಿಕೃತ ವೆಬ್ ಸೈಟ್: bcwd.karnataka.gov.in, shp.karnataka.gov.in/bcwd

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಇ-ಮೇಲ್: [email protected] ಮೂಲಕ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 8050770004/8050770005

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿಗೆ ಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು https://bcwd.karnataka.gov.in/ ವೆಸ್ಟ್’ಸೈಟ್ ನಲ್ಲಿ ಪರಿಶೀಲಿಸಬಹುದು.

Post Matric BCM Hostel Application 2025

ಯೂನಿಯನ್ ಬ್ಯಾಂಕ್ ನೇಮಕಾತಿ 2025

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment