ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಯಲ್ಲಿ ವಿವಿಧ ಹುದ್ದೆಗಳನ್ನು ಸೃಜಿಸಿ ಸರಕಾರ ಆದೇಶ ಹೊರಡಿಸಿತ್ತು, (Commercial Tax Department Recruitment 2023) ಇದೀಗ ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ (Commercial Tax Inspector) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೋರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Commercial Tax Department Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ವಾಣಿಜ್ಯ ತೆರಿಗೆ ಇಲಾಖೆ ಕರ್ನಾಟಕ (Commercial Tax Department)
ವೇತನ ಶ್ರೇಣಿ: 33,450 ರೂ. ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 230
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ವಾಣಿಜ್ಯ ತೆರಿಗೆ ಇಲಾಖೆ ಕರ್ನಾಟಕ (Commercial Tax Department) ಅಧಿಸೂಚನೆಯ ಪ್ರಕಾರ.
ಇಲಾಖೆಯ ಸೃಷ್ಟಿಕರಣದಂತೆ Economics or Mathametics or Commerce ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಅಭ್ಯರ್ಥಿಗಳು ಅವರು ಹೊಂದಿರುವ ವಿದ್ಯಾರ್ಹತೆಯಲ್ಲಿ ಕನಿಷ್ಠ ಯಾವುದೇ ಒಂದು ಸೆಮಿಸ್ಟರ್ / ಒಂದು ವರ್ಷದಲ್ಲಿ ವ್ಯಾಸಂಗ ಮಾಡಿದ್ದ ಸದರಿ ಪದವಿಗಳನ್ನು ಸಹ ಪರಿಗಣಿಸಲಾಗುವುದು.
ವೇತನ ಶ್ರೇಣಿ:
Commercial Tax Inspector – 33,450 ರಿಂದ 62,600 ರೂ.
ಹುದ್ದೆಗಳ ವಿವರ:
ವಾಣಿಜ್ಯ ತೆರಿಗೆಗಳ ಇನ್ಸ್ಪೆಕ್ಟರ್ – 230
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ (KPSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
KPSC Recruitment 2023 ಅರ್ಜಿ ಶುಲ್ಕ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: ರೂ.300/-
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪಾವತಿಸುವ ವಿಧಾನ: ಆನ್‌ಲೈನ್
Karnataka Commercial Tax Department Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2023
ಪ್ರಮುಖ ಲಿಂಕ್’ಗಳು:
KPSC ಅಧಿಸೂಚನೆ 2023: ಡೌನ್’ಲೋಡ್
ಆನ್‌ಲೈನ್ ಅರ್ಜಿ: 01-09-2023 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ
ಅಧಿಕೃತ ವೆಬ್ ಸೈಟ್: kpsc.kar.nic.in