Dharwad District Court Recruitment 2023: Dharwad District Court Released Notification For Various Posts. Eligible Candidates Can Apply Through Online Before The Last Date Mentioned In Notification.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಧಾರವಾಡದಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರ ಹಾಗೂ ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು (Dharwad District Court Recruitment 2023) ಪ್ರಕಟಿಸಲಾಗಿದೆ. ಉದ್ಯೋಗವನ್ನು ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023
Dharwad District Court Recruitment 2023 ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಧಾರವಾಡ.
ಒಟ್ಟು ಹುದ್ದೆಗಳು: 33 ಹುದ್ದೆಗಳು
ವೇತನ ಶ್ರೇಣಿ: 17,000 ರಿಂದ 42,000 ರೂ
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-03-2023
ವೇತನ ಶ್ರೇಣಿ :
ಬೆರಳಚ್ಚು-ನಕಲುಗಾರ 21,400 ರಿಂದ 42,000 ರೂ
ಜವಾನ (Peon) 17,000 ರಿಂದ 28,950 ರೂ
ವಿದ್ಯಾರ್ಹತೆ:
ಬೆರಳಚ್ಚು-ನಕಲುಗಾರ (Typist-Copyist) ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತೆ ನಮೂದಿಸಿದೆ.
1) ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
3)ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ (Peon)
(1) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
(2) ಕನ್ನಡ ಭಾಷೆ ಓದಲು ಬರೆಯಲು ತಿಳಿದಿರಬೇಕು.
(3) ಲಘುವಾಹನ ಚಾಲನಾ ಲೈಸನ್ಸ್ ಐಚ್ಚಿಕ (Optional)
ವಯೋಮಿತಿ:
ಸಾಮಾನ್ಯ ವರ್ಗ (GM) ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ
SC/ST, ಪ್ರವರ್ಗ-1 ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
ಶುಲ್ಕ ಪಾವತಿ:
ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ-2ಎ, 2ಬಿ , 3ಎ, ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ 200 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ 100 ರೂ
ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 01-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-03-2023 (ಇಂದು)
ಶುಲ್ಕ ಪಾವತಿ ಕೊನೆಯ ದಿನಾಂಕ: 03-03-2023
Dharwad District Court Recruitment 2023 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್: Apply Online