ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DHFWS Vijayanagara Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)
ವೇತನ ಶ್ರೇಣಿ: 14,000 ರೂ. ರಿಂದ 31,500 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ವಿಜಯನಗರ
ಶೈಕ್ಷಣಿಕ ಅರ್ಹತೆ:
DHFWS ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS, BE/B Tech in CSE/ISE/IT or M.Tech (CS/IT) or MCA, ಸ್ನಾತಕೋತ್ತರ ಪದವಿ, BSc in nursing or equivalent degree, or General Nursing (GNM) ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಜಿಲ್ಲಾ ಕುಷ್ಠರೋಗ ಸಲಹೆಗಾರ – 1
ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್ – 1
ಕ್ಲಿನಿಕಲ್ ಸೈಕಾಲಜಿಸ್ಟ್ – 1
ಸಮುದಾಯ ಶುಶ್ರೂಷಕರು – 1
ಸೈಕ್ಯಾಟ್ರಿಕ್ ನರ್ಸ್ – 1
ವಯೋಮಿತಿ:
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.
DHFWS Vijayanagara Recruitment 2023 ವೇತನ ಶ್ರೇಣಿ:
ಜಿಲ್ಲಾ ಕುಷ್ಠರೋಗ ಸಲಹೆಗಾರ – 31,500 ರೂ.
ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್ – 29,000 ರೂ.
ಕ್ಲಿನಿಕಲ್ ಸೈಕಾಲಜಿಸ್ಟ್ – 26,250 ರೂ.
ಸಮುದಾಯ ಶುಶ್ರೂಷಕರು – 14,000 ರೂ.
ಸೈಕ್ಯಾಟ್ರಿಕ್ ನರ್ಸ್ – 14,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ವಿಜಯನಗರ ಇವರಿಗೆ 01-11-2023 ರ ಮೊದಲು ಕಳುಹಿಸಬೇಕು.
DHFWS Vijayanagara Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-11-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್