ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ (Free Bus For Ladies) ಪ್ರಯಾಣದ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಕಾರ್ಯರೂಪಕ್ಕೆ ತರಲು ನಿರ್ಧರಿಸಲಾಗಿದೆ.
ಮಹಿಳೆಯರು ಬಸ್ಸಲ್ಲಿ ಟಿಕೆಟ್ ಪಡೆಯುವುದು ಕಡ್ಡಾಯ, ಆದೆರೆ ಟಿಕೆಟ್ ಮೇಲೆ ‘ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ’ ಎಂದು ನಮೂದಿಸಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿ ಸಂಸ್ಥೆ ಟಿಕೆಟ್ ಚೀಟಿ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದು, ಜನರು ಪರ ವಿರೋಧ ನಿಲುವುಗಳನ್ನು ವ್ಯಕ್ತ ಪಡಿಸುತ್ತಿದ್ದಾರೆ.
ಗೃಹ ಲಕ್ಷ್ಮೀ ಯೋಜನೆ ಜಾರಿ, ಆನ್‌ಲೈನ್ ಅರ್ಜಿ ಆಹ್ವಾನ
ಉಚಿತ ಪ್ರಯಾಣ ಇದ್ದರು ಟಿಕೆಟ್ ಯಾಕೆ? – Free Bus For Ladies
ಸರ್ಕಾರ ಮಹಿಳೆಯರಿಗಾಗಿ ಜಾರಿ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಯೋಜನೆಗೆ ‘ಮಹಿಳೆಯರಿಗೆ ಉಚಿತ ಟಿಕೆಟ್’ ನೀಡಲು ಕಾರಣ ಎಷ್ಟು ಮಹಿಳಾ ಪ್ರಯಾಣಿಕರು ಯಾವ ಸ್ಟಾಪ್ ನಿಂದ ಯಾವ ಸ್ಟಾಪ್’ ಸಂಚರಿಸಿದರು ಎಂಬ ಲೆಕ್ಕವನ್ನು ಮಾಡಿ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡುತ್ತದೆ.
ಹೀಗೆ ಮಾಡುವುದರಿಂದ ಸಾರಿಗೆ ಸಂಸ್ಥೆಗಳಿಗೆ ಹಾಗೂ ಸರ್ಕಾರಕ್ಕೆ ಈ ಯೋಜನೆ ಎಷ್ಟು ಜನರಿಗೆ ತಲುಪಿದೆ ಎನ್ನುವ ಮಾಹಿತಿಯು ಲಭ್ಯವಾಗುತ್ತದೆ.
