ಗೃಹಲಕ್ಷ್ಮಿ ಯೋಜನೆ: 4,449 ಕೋಟಿ ರೂ. ಬಿಡುಗಡೆ | Gruha Lakshmi Scheme Amount Release

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ 1.16 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. Gruha Lakshmi Scheme ಗಾಗಿ ರೂ. 4,449 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಹಿತಿ ನೀಡಿದ್ದಾರೆ.

“ನವಶಕ್ತಿ ಸಂಭ್ರಮ” ಎಂಬ ಶೀರ್ಷಿಕೆ ಅಡಿಯಲ್ಲಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಅವರು, ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಯನ್ನು ಜಾರಿಗೆ ತಂದಿದೆ.

Gruha Lakshmi Scheme Amount Release:

ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ.

ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ.70,427 ಕೋಟಿ ಹಣವನ್ನು ಮೀಸಲಿಟ್ಟು, ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿದ್ದೇವೆ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ಮೊದಲ ತಿಂಗಳ ಹಣ ಜಮಾ ಆಗಿರುವವರಿಗೆ ಸದ್ಯದಲ್ಲೇ ನಿಮ್ಮ ಖಾತೆಗೆ ಎರಡನೇ ಕಂತಿನ ಹಣ ಜಮಾ ಆಗಬಹುದು. ಇನ್ನೂ ತಾಂತ್ರಿಕ ದೋಷದಿಂದ ಮೊದಲ ಕಂತಿನ ದುಡ್ಡು ಜಮಾ ಆಗದೆ ಇದ್ದಲ್ಲಿ ಎರಡೂ ಕಂತಿನ ಒಟ್ಟು 4 ಸಾವಿರ ರೂ. ಜಮಾ ಆಗಲಿದೆ.

ಹೈಲೈಟ್ಸ್:

  • ಈವರೆಗೆ 1.16 ಕೋಟಿ ಮಹಿಳೆಯರಿಂದ ಅರ್ಜಿ ಸಲ್ಲಿಕೆ
  • 1.08 ಕೋಟಿ ಮಹಿಳೆಯರಿಗೆ ಹಣ ಜಮೆ
  • ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಹಾಯಧನದ ಪಾವತಿಗಾಗಿ ಒಟ್ಟು ರೂ.4,449 ಕೋಟಿ ಹಣ ಬಿಡುಗಡೆ

ಇತರೆ ಮಾಹಿತಿಗಳನ್ನು ಓದಿ

ಅಂತು ಇಂತು ಗೃಹಲಕ್ಷ್ಮೀ 2ನೇ ಕಂತಿನ ಹಣ ಬಂತು

ವಾಹನ ಖರೀದಿಸಲು 3 ಲಕ್ಷ ಸಹಾಯಧನ, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಗಂಗಾ ಕಲ್ಯಾಣ ಉಚಿತ ಬೋರ್‌ವೇಲ್ ಯೋಜನೆ-ಆನ್‌ಲೈನ್‌ ಅರ್ಜಿ ಆಹ್ವಾನ

Kisan Credit Card Loan 2023 Karnataka

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment