ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಲು ಕಾಯುತ್ತಿರುವ ಮನೆ ಯಜಮಾನಿರಿಗೆ ಗುಡ್ ನ್ಯೂಸ್. ಗೃಹ ಲಕ್ಷ್ಮಿ ಯೋಜನೆಯ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗುವ ದಿನಾಂಕ (Gruha Lakshmi Scheme Apply Online date) ವನ್ನು ನಿಗದಿ ಮಾಡಲಾಗಿದೆ.
Gruha Lakshmi Scheme Apply Online date
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರೋಸೆಸ್ ಇದೇ ಜುಲೈ 19 ರಿಂದ ಆರಂಭಿಸಲಾಗುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಷ್ಟ್ರೀಯ ನಾಯಕರನ್ನು ಕರೆಸಿ ಯೋಜನೆಗೆ ಚಾಲನೆ ನೀಡುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಆಗಸ್ಟ್ 15 ರಿಂದ ಮನೆ ಒಡತಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ. ಜುಲೈ 19 ರಿಂದ ಅರ್ಜಿ ಸ್ವೀಕಾರ ಪ್ರಕ್ರೀಯೆ ಆರಂಭವಾಗಲಿದ್ದು, ಬ್ಯಾಂಕ್ ಖಾತೆಗೆ ಆಧಾರ ಜೋಡನೆ ಇರುವ ಫಲಾನುಭವಿಗಳಿಗೆ ಅಕೌಂಟ್‌ಗಳಿಗೆ ಆಗಸ್ಟ್ 15 ರಿಂದ ನೇರವಾಗಿ ಹಣ ಜಮಾ ಆಗುತ್ತದೆ. ಗೃಹಲಕ್ಷ್ಮೀ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದಿದ್ದಾರೆ.
ಬಿಪಿಎಲ್, ಎಪಿಎಲ್ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಗುರುತಿಸಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿ ತಿಂಗಳಿಗೆ 2,000 ರೂ. ನೀಡಲಾಗುತ್ತದೆ. ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗಾಗಿ ರಾಜ್ಯ ಸರ್ಕಾರ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅದಕ್ಕಾಗಿ ಈಗಾಗಲೇ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಗೌರವಧನ ನೀಡವ ಆಧಾರದ ಮೇಲೆ ಅವರನ್ನು ನೇಮಿಸಲಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಆನ್‌ಲೈನ್ ಅರ್ಜಿ ಹೇಗೆ ಭರ್ತಿ ಮಾಡುವುದು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ. ಓದಲು ಈ ಲಿಂಕ್ ಮೇಲೆ ಕ್ಲಕ್ ಮಾಡಿ:- “ಗೃಹ ಲಕ್ಷ್ಮೀ” ಯೋಜನೆ 2023 ಆನ್‌ಲೈನ್ ಅರ್ಜಿ ಮಾಹಿತಿ
ಸರ್ಕಾರ ಇತರೆ ಯೋಜನೆಗಳು
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂತಾ? ಚೆಕ್ ಮಾಡಿ
“ಗೃಹ ಜ್ಯೋತಿ” ಅರ್ಜಿ ಸಲ್ಲಿಸುವ ಸುಲಭ ಮಾರ್ಗ