ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ “ಗೃಹಲಕ್ಷ್ಮಿ” ಯೋಜನೆಯ ಹಣ ಬಿಡುಗಡೆಗೆ ಮುಹೂರ್ತ ನಿಗದಿ (Gruha Lakshmi Scheme Launch Date) ಮಾಡಿಲಾಗಿದೆ. ಬೆಳಗಾವಿಯಲ್ಲಿ “ಗೃಹಲಕ್ಷ್ಮಿ” ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
Gruha Lakshmi Scheme Launch Date
ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ 11 ಸಾವಿರ ಕಡೆಗಳಲ್ಲಿ ಏಕಕಾಲದಲ್ಲೇ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಗೆ ಚಾಲನೆ ಸಿಗಲಿದ್ದು, ಅವತ್ತಿನಿಂದ ಮನೆ ಯನಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ವರ್ಗಾವಣೆಯಾಗಲಿದೆ.
ವಿಕಾಸಸೌಧದಲ್ಲಿ ಆಗಸ್ಟ್ 10 ರಂದು ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳ ಜತೆಗಿನ ವಿಡಿಯೊ ಸಂವಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗೃಹಲಕ್ಷ್ಮಿಯರಿಗೆ ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್ (Gruha Lakshmi Pink Smart Card)
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಿಂಕ್ ಬಣ್ಣದ ಸ್ಮಾರ್ಟ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ. ಪಿಂಕ್ ಸ್ಮಾರ್ಟ್ ಕಾರ್ಡ್ (Gruha Lakshmi Pink Card) ಅನ್ನು ಯೋಜನೆಯ ಚಾಲನೆ ನೀಡುವ ಸಂದರ್ಭದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಪಿಂಕ್ ಕಾರ್ಡ್‌ನಲ್ಲಿ ಫಲಾನುಭವಿಯ ವಿವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಭಾವಚಿತ್ರವನ್ನು ಅದರಲ್ಲಿ ಇರಲಿದೆ.
11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ:
ರಾಜ್ಯದಲ್ಲಿ 11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ (Gruha Lakshmi Scheme Launch Date) ದೊರೆಯಲ್ಲಿದ್ದು, ಪ್ರತಿ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಪ್ರತಿ ಪಂಚಾಯಿತಿಗೆ ಒಬ್ಬ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪಕ್ಷಾತೀತವಾಗಿ ಈ ಕಾರ್ಯಕ್ರಮವನ್ನು ಆಯೋಜಿಲಾಗಿದೆ.
ಈ ಸಮಾರಂಭಕ್ಕಾಗಿ ಪಂಚಾಯಿತಿ, ತಾಲೂಕು ಜಿಲ್ಲೆ, ಪುರಸಭೆ, ನಗರಸಭೆ ಮಟ್ಟದಲ್ಲಿ ಕಲ್ಯಾಣ ಮಂಟಪ, ಸಮುದಾಯ ಭವನಗಳನ್ನು, ಪ್ರೈವೇಟ್ ಗ್ರೌಂಡ್‌ಗಳನ್ನು ಮೊದಲೇ ಬುಕ್ ಮಾಡಿ, ಈ ನಿಟ್ಟಿನಲ್ಲಿ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
1.50 ಕೋಟಿ ಫಲಾನುಭವಿಗಳಿಗೆ 2,000 ರೂ. ಹಣ ಜಮಾ
ಈವರೆಗೆ 1.5 ಕೋಟಿ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ (Gruha Lakshmi) ಗೆ ನೊಂದಣಿ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದೆ. ಈ ಯೋಜನೆಗೆ ಚಾಲನೆ ನೀಡುವ ಸಂಬಂಧ ಸಚಿವರು, ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗಿದ್ದು, ಸಲಹೆ ಸೂಚನೆಯ ಮೇರೆಗೆ ಆಗಸ್ಟ್ 20ನೇ ತಾರೀಖು ನಿಗದಿಯಾಗಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದ್ದು, ಅವತ್ತಿನಿಂದ ಫಲಾನುಭವಿಗಳ ಖಾತೆಗೆ ಆಗಸ್ಟ್ ತಿಂಗಳ ಹಣ ವರ್ಗಾವಣೆಯಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ
ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದು ಹೇಗೆ?
✅ರೇಷನ್ ಕಾರ್ಡ್ ತಿದ್ದುಪಡಿ, ಸದಸ್ಯರ ಸೇರ್ಪಡೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್