Gruha Lakshmi Scheme: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆಗೆ ಅಂತೂ ಮುಹೂರ್ತ ನಿಗದಿಯಾಗಿದೆ. ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಿ ಮಹಿಳಾ ಸಬಲೀಕರಣ ಮತ್ತು ಬೆಲೆ ಏರಿಕೆಯ ಬರೆಯನ್ನು ತಡೆಯಲು ಈ ಯೋಜನೆ ಸಹಕಾರಿಯಾಗಲಿದೆ.
ಗೃಹನಿಯರು ಗೃಹಲಕ್ಷ್ಮಿ ಯೋಜನೆಯ ಹಣ ಬರುವಿಕೆಗಾಗಿ ಕಾಯುತ್ತಿದ್ದು, ಇದೇ ತಿಂಗಳಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.
ಗೃಹಲಕ್ಷ್ಮಿ ಯೋಜನೆಗೆ ಇದೇ ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಧಿಕೃತ ಚಾಲನೆ ಸಿಗಲಿದೆ ಎಂದು ಸರ್ಕಾರದಿಂದ ತಿಳಿಸಲಾಗಿದೆ.
1.10 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ
ಅದೇ ದಿನ ರಾಜ್ಯದ 1.10 ಕೋಟಿ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆಗೊಳಿಸಲಾಗುತ್ತದೆ. ಮೊದಲ ಕಂತಿನ 2,000 ರೂ. ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ಇನ್ನುವರೆಗು ಯಾರು ಗೃಹಲಕ್ಷ್ಮೀ ಅರ್ಜಿ ಸಲ್ಲಿಸಿಲ್ಲ ಅಂತವರು ಬೇಗ ಅರ್ಜಿ ಸಲ್ಲಿಸಿ.
ಏಕಕಾಲಕ್ಕೆ 11 ಸಾವಿರ ಕಡೆಗಳಲ್ಲಿ Gruha Lakshmi Scheme ಚಾಲನೆ:
ರಾಜ್ಯದ 11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲ್ಲಿದ್ದು, ಪ್ರತಿ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಪ್ರತಿ ಪಂಚಾಯಿತಿಗೆ ಒಬ್ಬ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪಕ್ಷಾತೀತವಾಗಿ ಈ ಕಾರ್ಯಕ್ರಮವನ್ನು ಆಯೋಜಿಲಾಗಿದೆ.
ಗೃಹಲಕ್ಷ್ಮಿ ಸ್ಮಾರ್ಟ್ ಕಾರ್ಡ್ ವಿತರಣೆ
ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಕುಟುಂಬದ ಯಜಮಾನಿಯರಿಗೆ ರಾಜ್ಯ ಸರ್ಕಾರ ಸ್ಮಾರ್ಟ್ʼಕಾರ್ಡ್ ವಿತರಣೆ ಮಾಡಲಿದೆ. ಈ ಕಾರ್ಡ್ ಮೂಲಕ ಫಲಾನುಭವಿಗಳು ತಮಗೆ ಬಿಡುಗಡೆಯಾದ ಹಣದ ಮಾಹಿತಿ ಪಡೆಯಬಹುದು.
ಇತರೆ ಮಾಹಿತಿಗಳನ್ನು ಓದಿ
ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿ, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಿರಿ
ಹೊಸ ರೇಷನ್ ಕಾರ್ಡ್ 2023: ಅರ್ಜಿ ಸಲ್ಲಿಸುವವರಿಗೆ ಸರ್ಕಾರದ ಹೊಸ ಆದೇಶ
✅ರೇಷನ್ ಕಾರ್ಡ್ ತಿದ್ದುಪಡಿ, ಸದಸ್ಯರ ಸೇರ್ಪಡೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್