ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಜಮಾ | Gruhalakshmi Scheme Amount Credited DBT Status Check 2025

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಗೃಹಲಕ್ಷ್ಮೀ ಯೋಜನೆಯ (Gruhalakshmi Scheme Amount) ಹಣವು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾರ ಸಂದಾಯ ಮಾಡಲಾಗುತ್ತದೆ.

ಮೂರು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಸಂದಾಯವಾಗದ ಕಾರಣ ಮಹಿಳೆಯರು ಯಾವಾಗ ಹಣ ನಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾತುರದಿಂದ ಕಾಯುತ್ತಿದ್ದರು. ಗೃಹಲಕ್ಷ್ಮೀ ಯೋಜನೆಯ ಮೂರು ಕಂತಿನ ಹಣದಲ್ಲಿ‌ ಒಂದು ಕಂತಿನ 2,000 ರೂ. ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.

Gruhalakshmi Scheme Amount DBT Status Check:

24-05-2024 ರಂದು ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಹಂತ ಹಂತವಾಗಿ ಗೃಹಲಕ್ಷ್ಮೀ ಯೋಜನೆಯ ಒಂದು ಕಂತಿನ 2,000 ರೂ. ಹಣವು ಅವರ ಖಾತೆಗೆ ವರ್ಗಾವಣೆ ಆಗಿದೆ. ಇನ್ನೂ ಎರಡು ಕಂತುಗಳ ಹಣವು ಸಂದಾಯವಾಗಬೇಕಿದೆ. ನಿಮಗೂ ಹಣ ಜಮಾ ಆಗಿದೆಯಾ ಎಂಬುದನ್ನು DBT Status ಚೆಕ್ ಮಾಡಿಕೊಳ್ಳಬಹುದು.

DBT Status Check Link: ಚೆಕ್‌ ಮಾಡಿ

SSLC ಪಾಸಾದ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

PM ಉಜ್ವಲ ಯೋಜನೆ: ಉಚಿತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಅರ್ಜಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment