ಕಾಂಗ್ರೇಸ್ ಪಕ್ಷ ವಿಧಾನ ಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಘೋಷಣೆ ಮಾಡಿದ್ದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruhalakshmi scheme in karnataka) ಅರ್ಜಿ ಸಲ್ಲಿಕೆ ಯಾವಾಗ ಆರಂಭವಾಗುತ್ತದೆ ಎಂದು ಕಾಯುತ್ತಿದ್ದಿರಿ. ನಿಮಗಾಗಿ ಶುಭಸುದ್ದಿ ಈ ಯೋಜನೆಯ ಜಾರಿ ಮಾಡುವ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.
Gruhalakshmi scheme in karnataka
“ಕೊಟ್ಟ ಮಾತಿನಂತೆ ಒಂದು (ಶಕ್ತಿ ಯೋಜನೆ) ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ (Gruha Lakshmi Scheme ) ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ (ಇನ್ನೇರೆಡು ದಿನಗಳಲ್ಲಿ ಆರಂಭವಾಗಬಹುದು). ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು.” ಎಂದು ಸಿಎಂ ತಿಳಿಸಿದ್ದಾರೆ.
2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಬಗ್ಗೆ ಹೇಳಿದ್ದಾರೆ.
2.50 ಲಕ್ಷ ಖಾಲಿ ಹುದ್ದೆಗಳನ್ನು ಒಂದೇ ಸಲಕ್ಕೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ:- Gruha lakshmi Scheme
ಸರ್ಕಾರ ಇತರೆ ಯೋಜನೆಗಳು
“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್ ಅರ್ಜಿ