ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಮೇ ತಿಂಗಳಿನ ಹಣ ಯಾವಾಗ ಜಮಾ (Gruhalakshmi Scheme Update) ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ, ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಏಪ್ರಿಲ್ ತಿಂಗಳಿನ 2,000 ರೂ. ಹಣವು ಈಗಾಗಲೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಮೇ ತಿಂಗಳಿನ ಹಣವು ಇನ್ನೂ ವರ್ಗಾವಣೆ ಆಗಬೇಕಿದೆ. ಆದಷ್ಟು ಬೇಗ ಮೇ ತಿಂಗಳಿನ ಹಣವು ಅರ್ಹ ಯಜಮಾನಿ ಮಹಿಳೆಯರ ಖಾತೆ ಸೇರಲಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಹಣ ವರ್ಗಾವಣೆಗೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಫಲಾನುಭವಿಗಳಿಗೆ ಸಂದಾಯವಾಗಿದ್ದು, ಮೇ ತಿಂಗಳಿನ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ತಿಳಿಸಿದರು.
Gruhalakshmi Scheme Update 2025:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ,ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಗೃಹಲಕ್ಷ್ಮಿ ಯೋಜನೆಗೆ ಯಾವುದೇ ತೊಂದರೆ ಇಲ್ಲ.
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಹೇಳಿದ್ದಾರೆ.
Gruhalakshmi Scheme DBT Status Check 2025: ಚೆಕ್ ಮಾಡಿ
ಇತರೆ ಮಾಹಿತಿಗಳು:

