ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಹಣವು ಯಾವಾಗ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್, ಗೃಹಲಕ್ಷ್ಮೀ ಯೋಜನೆಯ ಹಣ (Gruhalaxmi Amount) ಯಾವಾಗ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯನ್ನು ಸರ್ಕಾರ ಮಹಿಳೆಯರ ಸಭಲೀಕರಣಕ್ಕಾಗಿ ಜಾರಿಗೆ ತಂದಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ.
ಈಗಾಗಲೇ ಡಿಸೆಂಬರ್ ತಿಂಗಳಿನ ಗೃಹಲಕ್ಷ್ಮೀ ಯೋಜನೆ ಹಣವು ಅರ್ಹ ಫಲಾನುಭವಿಗಳ ಖಾತೆ ಸೇರಿದ್ದು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನ ಹಣವು ಇನ್ನು ವರ್ಗಾವಣೆಯಾಗಿಲ್ಲ. ಯಾವಾಗ ಈ ಮೂರು ತಿಂಗಳ ಹಣವು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳೆಯರು ಕಾಯುತ್ತಿದ್ದಾರೆ.
Gruhalaxmi Amount Credit Date:
ಗೃಹಲಕ್ಷ್ಮೀ ಯೋಜನೆಯ ಎರಡು ಕಂತುಗಳ 4,000 ರೂ. ಹಣವನ್ನು ಮಾರ್ಚ್ 31 ರ ನಂತರ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಿಗೆ ಮಾಡಿದ್ದೇವು ಅದಾದ ಬಳಿಕ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ಸರ್ಕಾರ ಇತರೆ ಯೋಜನೆಗಳು:

