ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಉಂಟಾಗಿರುವ ಒಟ್ಟು 195 ತಾಲ್ಲೂಕುಗಳನ್ನು ಬರ ಪೀಡಿತ (Karnataka Drought Taluks List) ಎಂದು ಗುರುತಿಸಲಾಗಿದ್ದು, ಇವುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯವನರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ಮಾಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಾವಳಿಯಂತೆ 161 ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲು ಅರ್ಹವಾಗಿವೆ ಎಂದರು.
ಇನ್ನೂ 34 ತಾಲ್ಲೂಕುಗಳಲ್ಲೂ ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರದ ಮಾರ್ಗಸೂಚಿ ಅನ್ವಯವಾಗದಿದ್ದರೂ, ಈ 34 ತಾಲ್ಲೂಕುಗಳನ್ನು ಪಟ್ಟಿಗೆ (Karnataka Drought Taluks List) ಸೇರಿಸಲಾಗುವುದು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲು ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಲಾಗಿದೆ ಎಂದು ತಿಳಿಸಿದರು.
ಕಳೆದ ವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲ್ಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಿಸಲಾಗಿತ್ತು, ಆದರೆ ಈ ವರ್ಷ ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಇರುವ ಕಾರಣಕ್ಕಾಗಿ 134 ತಾಲ್ಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ಕೃಷ್ಣಬೈರೇಗೌಡ ಹೇಳಿದರು.
ಈ ಪಟ್ಟಿಯಲ್ಲಿರುವ 195 ತಾಲ್ಲೂಕುಗಳಲ್ಲದೇ ಇನ್ನೂ 40 ತಾಲ್ಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರದ ನಿಯಮಾವಳಿ ಅಡ್ಡಿಯಾಗಿದ್ದು, 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಈ ವೇಳೆ ಸಮೀಕ್ಷೆಗೆ ಒಳಪಟ್ಟ ತಾಲ್ಲೂಕುಗಳು ಬರ ಮಾರ್ಗಸೂಚಿಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.
ಬರಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಸಮೀಕ್ಷೆ ನಡೆಸಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸುತ್ತಿದ್ದೇವೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯವನವರು ತಿಳಿಸಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ
ರೇಷನ್ ಕಾರ್ಡ್ Status ಅನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 60,000 ರೂ. ವಿದ್ಯಾರ್ಥಿವೇತನ ಅರ್ಜಿ ಆಹ್ವಾನ
Karnataka Drought Taluks List 2023: ಬರಪೀಡಿತ ತಾಲೂಕು ಪಟ್ಟಿ 2023





