Karnataka Free Laptop Scheme 2023: ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಉಚಿತ ಲ್ಯಾಪ್ ಟಾಪ್ ಪಡೆಯಲು ಖಾಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಈ ಕುರಿತು ಮಾಹಿತಿ ಇಲ್ಲಿ ನೀಡಲಾಗಿದೆ ಓದಿ.
Karnataka Free Laptop Scheme 2023 For Students
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ ಟಾಪ್ ವಿತರಿಸಲು (Karnataka Free Laptop Scheme 2023) ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದರು.
ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ (Free Laptop For Students in Karnataka 2023) ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಈ ಮಾಹಿತಿ ನಿಮಗೆ ಉಪಯುಕ್ತವೇನಿಸಿದರೆ ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ ಹಾಗೂ ಈ ಯೋಜನೆಯ ಲಾಭ ಪಡೆಯಿರಿ.
ಇತರೆ ಮಾಹಿತಿಗಳನ್ನು ಓದಿ
Hi
Helo
Hi