ಎಲ್ಲರಿಗೂ ನಮಸ್ಕಾರ, ನೀವು ಬೋರ್‌ವೇಲ್ ಕೊರೆಸಬೇಕೆ? ನಿಮಗೆ ಕೊಳವೆಬಾವಿ ಕೊರೆಸಲು ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆಯಬೇಕೆ? ಹಾಗಿದ್ದರೆ ಈ ಲೇಖನ ನಿಮಗಾಗಿ. Karnataka Ganga Kalyana Scheme 2023 ಆನ್‌ಲೈನ್ ಅರ್ಜಿ ಆರಂಭವಾಗಿದ್ದು, ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
ಗಂಗಾ ಕಲ್ಯಾಣ ಯೋಜನೆ: ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವೈಯಕ್ತಿಕ ಕೊಳವೆ ಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯಡಿ ಸಂಪೂರ್ಣ ಸಹಾಯಧನ ಪಡೆಯಬಹುದಾಗಿದೆ
Karnataka Ganga Kalyana Scheme 2023:
ಯೋಜನೆಯ ಹೆಸರು: ಗಂಗಾ ಕಲ್ಯಾಣ ಯೋಜನೆ
ಸಹಾಯಧನ ಮೊತ್ತ: 3 ಲಕ್ಷ ರೂ. ಮತ್ತು 4 ಲಕ್ಷ ರೂ.
ಈ ನಿಗಮಗಳ ಅಡಿಯಲ್ಲಿ ಬರುವ ಸಮುದಾಯದವರಿಂದ ಅರ್ಜಿ ಆಹ್ವಾನ:
- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ
- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ
Karnataka Ganga Kalyana Scheme ಅರ್ಹತೆ:
1) ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ:
ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ. 4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಇನ್ನುಳಿದ ಜಿಲ್ಲೆಗಳಿಗೆ ರೂ.3.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.
ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ. 50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.
2) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ:
ವೈಯಕ್ತಿಕ ಕೊಳವೆ ಬಾವಿ ಯೋಜನೆಗಾಗಿ ಸರ್ಕಾರವು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ 4 ಲಕ್ಷ ರೂ. ಗಳನ್ನು ನೀಡುತ್ತದೆ. ಮತ್ತು ಇತರೆ ಇನ್ನೂಳಿದ ಜಿಲ್ಲೆಗಳಿಗೆ ರೂ.3 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.
3) ಜೀವಜಲ ಯೋಜನ: ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ ರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ:
- ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.98,000/- ಗಳ ಮಿತಿಯೊಳಗಿರಬೇಕು.
- ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು.
- ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು
- ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು
- ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
- ಈ ಯೋಜನೆಯಲ್ಲಿ ಘಟಕ ವೆಚ್ಚ ರೂ.3.75 ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.75 ಲಕ್ಷಗಳು. (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಸೂಚನೆ:
- ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
- ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.
Karnataka Ganga Kalyana Scheme- ಬೇಕಾಗುವ ದಾಖಲೆಗಳು:
- ಜಾತಿ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಇತ್ತೀಚಿನ ಆರ್‌ಟಿಸಿ ಪ್ರತಿ
- ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಭೂ-ಕಂದಾಯ ಪಾವತಿಸಿದ ರಸೀದಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
Karnataka Ganga Kalyana Scheme ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.
Karnataka Ganga Kalyana Scheme Online Application Link:
ಅರ್ಜಿ ಸಲ್ಲಿಕೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಲ್ಪ ಸಂಖ್ಯಾತ ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kmdc.karnataka.gov.in, kmdconline.karnataka.gov.in
Karnataka Ganga Kalyana Scheme ಕೊನೆಯ ದಿನಾಂಕಗಳು:
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: 30-10-2023
ಒಕ್ಕಲಿಗ ಅಭಿವೃದ್ಧಿ ನಿಗಮ: 30-10-2023
ಲಿಂಗಾಯತ ಅಭಿವೃದ್ಧಿ ನಿಗಮ: 30-10-2023
ಮರಾಠಾ ಅಭಿವೃದ್ಧಿ ನಿಗಮ: 30-10-2023
ಅಲ್ಪ ಸಂಖ್ಯಾತ ಅಭಿವೃದ್ಧಿ: 03-10-2023
ಇತರೆ ಮಾಹಿತಿಗಳನ್ನು ಓದಿ
Education Loan: ವಿದ್ಯಾರ್ಥಿಗಳಿಗೆ 3 ಲಕ್ಷದವರೆಗೆ ಶೈಕ್ಷಣಿಕ ಸಾಲ ಯೋಜನೆ