ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ | Karnataka Ganga Kalyana Scheme 2024 Apply Online @sevasindhu.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಗಂಗಾ ಕಲ್ಯಾಣ ಉಚಿತ ಬೋರ್‌ವೇಲ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾ..? ನಿಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಲು ಸರ್ಕಾರದಿಂದ ಸಹಾಯಧನ ಪಡೆಯಬೇಕೆ? Ganga Kalyana Scheme 2024 ಎಷ್ಟು ಸಹಾಯಧನ ಸಿಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

Karnataka Ganga Kalyana Scheme 2024:

ಯೋಜನೆಯ ಹೆಸರು: ಗಂಗಾ ಕಲ್ಯಾಣ ಯೋಜನೆ
ಸಹಾಯಧನ ಮೊತ್ತ: 3.75 ಲಕ್ಷ ರೂ. ಮತ್ತು 4.75 ಲಕ್ಷ ರೂ.

ಗಂಗಾ ಕಲ್ಯಾಣ ಯೋಜನೆ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೈಯಕ್ತಿಕ ಕೊಳವೆ ಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ರೈತರಿ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನ ಪಡೆಯಬಹುದಾಗಿದೆ.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಜನರಿಗೆ ವೈಯಕ್ತಿಕ ಕೊಳವೆ ಬಾವಿ ಕೊರೆಸಲು ಘಟಕ ವೆಚ್ಚ 4.75 ಲಕ್ಷ ರೂ. ಗಳಲ್ಲಿ 4.25 ಲಕ್ಷ ರೂ.ಗಳ ಸಹಾಯಧನ ನೀಡುತ್ತಾರೆ. ಹಾಗೂ ಇದರಲ್ಲಿ 75,000 ರೂ. ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡುತ್ತಾರೆ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಗಳ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ಮಂಜೂರು ಮಾಡುತ್ತಾರೆ.

ಇನ್ನುಳಿದ ಜಿಲ್ಲೆಗಳ ಜನರಿಗೆ ಘಟಕ ವೆಚ್ಚ 3.75 ಲಕ್ಷ ರೂ. ಗಳಲ್ಲಿ ಇದರಲ್ಲಿ 3.25 ಲಕ್ಷ ರೂ. ಸಹಾಯಧನವನ್ನು ಸರ್ಕಾರ ನೀಡುತ್ತದೆ. ಹಾಗೂ ಸಹಾಯಧನ ಮೊತ್ತದಲ್ಲಿ ಪ್ರತಿ ಕೊಳವೆ ಬಾವಿಗೆ 75,000 ರೂ. ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿಸುತ್ತಾರೆ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಗಳ ಸಾಲವನ್ನು ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡುತ್ತಾರೆ.

ಈ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಟ 01 ಎಕರೆ ಜಮೀನು ಇರಬೇಕು. ಇತರೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಟ 02 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.

ತೆರೆದ ಬಾವಿ: ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಈ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದವರಿಂದ ಅರ್ಜಿ ಆಹ್ವಾನ:

  • ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ
  • ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ

ಸೂಚನೆ:

  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
  2. ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.

ಬೇಕಾಗುವ ದಾಖಲೆಗಳು:

  • ಜಾತಿ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ಇತ್ತೀಚಿನ ಆರ್‌ಟಿಸಿ ಪ್ರತಿ
  • ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಭೂ-ಕಂದಾಯ ಪಾವತಿಸಿದ ರಸೀದಿ
  • ಸ್ವಯಂ ಘೋಷಣೆ ಪತ್ರ
  • ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ

Karnataka Ganga Kalyana Scheme ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಲಿಂಕ್‌ನ್ನು ಕೇಳಗೆ ನೀಡಲಾಗಿದೆ. ಅಥವಾ ಗ್ರಾಮ ಒನ್‌, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Karnataka Ganga Kalyana Scheme Online Application Link:
ಆನ್‌ಲೈನ್‌ ಅರ್ಜಿ ಲಿಂಕ್‌: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ sevasindhu.karnataka.gov.in, sevasindhuservices.karnataka.gov.in

Karnataka Ganga Kalyana Scheme Last Date:

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೇಳಗಿನ ನಿಗಮಗಳಿಗೆ ಅನುಗುಣವಾಗಿ ಕೊನೆಯ ದಿನಾಂಕಗಳನ್ನು ನಿಗದಿ ಮಾಡಲಾಗಿದೆ.

  • ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: 31-08-2024
  • ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: 31-08-2024
  • ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: 31-08-2024
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: 30-08-2024
  • ಸವಿತಾ ಸಮಾಜ ಅಭಿವೃದ್ಧಿ ನಿಗಮ: 31-08-2024
  • ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ: 31-08-2024
  • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: 31-08-2024
  • ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ: 31-08-2024
  • ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ: 31-08-2024
  • ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ: 30-08-2024

ಇತರೆ ಮಾಹಿತಿಗಳನ್ನು ಓದಿ:

ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ

Telegram Group Join Now
WhatsApp Group Join Now

Leave a Comment

error: Content is protected !!