ವಿಶ್ವಕರ್ಮ ನಿಗಮದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ | Karnataka Vishwakarma Scheme 2023 Apply Online @kvcdcl.karnataka.gov.in

Telegram Group Join Now
WhatsApp Group Join Now

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ವಿವಿಧ ಸಹಾಯಧನ ಮತ್ತು ಸಾಲ-ಸೌಲಭ್ಯ (Karnataka Vishwakarma Scheme 2023) ಯೋಜನೆಗಳಿಗೆ ಅರ್ಹರಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವಕರ್ಮ ಸಮುದಾಯದವರಿಗಾಗಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಿಗೆ ಅರ್ಹ ಫಲಾನುಭಿವಿಗಳು ಅರ್ಜಿ ಸಲ್ಲಿಸಬಹುದು.

Karnataka Vishwakarma Scheme 2023 Eligibility:

  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
  2. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ/225/ಬಿಸಿಎ/2000 ದಿನಾಂಕ: 30/03/2002ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.
  3. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
  4. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
  5. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
  6. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
  7. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/-ಲಕ್ಷಗಳು.
  8. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
  9. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
  10. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/-ಗಳ ಮಿತಿಯೊಳಗಿರಬೇಕು. II) ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.

Karnataka Vishwakarma Scheme 2023 Details:

  1. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು.
  2. ಸ್ವಯಂ ಉದ್ಯೋಗ ನೇರಸಾಲ ಯೋಜನೆ.
  3. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು).
  4. ಅರಿವು- ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ),
  5. ಗಂಗಾ ಕಲ್ಯಾಣ ಯೋಜನೆ – ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.
  6. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ),
  7. ಸ್ವಾವಲಂಬಿ ಸಾರಥಿ ಯೋಜನೆ.
  8. ವಿದೇಶಿ ವ್ಯಾಸಂಗ ಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00/-ಲಕ್ಷಗಳ ಮಿತಿಯಲ್ಲಿರಬೇಕು.
  9. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.

ಸೂಚನೆಗಳು:

  • ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ / ಶ್ರೀಮತಿ | ಕುಮಾರಿ ಮುಂತಾದ ಮಾಹಿತಿಗಳು)
  • ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
  • ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ ಸೈಟ್: https://kvcdcl. karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಗಳಲ್ಲಿ ಪೂರ್ವಾಹ್ನ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

Karnataka Vishwakarma Scheme 2023 Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ kvcdcl.karnataka.gov.in, sevasindhu.karnataka.gov.in

Karnataka Vishwakarma Scheme 2023 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2023 (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)

ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 31/10/2023ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಯೋಜನೆಗಳ ಅರ್ಜಿ ಅಹ್ವಾನ

ಸಹಾಯಧನ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment

error: Content is protected !!