KCC ಬ್ಯಾಂಕ್‌ ನೇಮಕಾತಿ 2022 | KCC Bank Recruitment 2022 For 87 Clerk Posts

Telegram Group Join Now
WhatsApp Group Join Now

ಧಾರವಾಡದ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ನಲ್ಲಿ ಖಾಲಿ ಇರುವ 87 ಕ್ಲರ್ಕ್ (ಸಹಾಯಕರು) ಹುದ್ದೆಗಳನ್ನು ನೇರ ನೇಮಕಾತಿಗಾಗಿ ಅಧಿಸೂಚನೆ (KCC Bank Recruitment 2022) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬ್ಯಾಂಕಿನ ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಈ ಕೇಳಕಂಡಂತೆ ವಿದ್ಯಾರ್ಹತೆ, ವೇತನ ಶ್ರೇಣಿ, ಹಾಗೂ ಇತರೆ ಮಾಹಿತಿಯನ್ನು ನೀಡಲಾಗಿದೆ.

ವಿದ್ಯಾರ್ಹತೆ:

  • ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 60% ರಷ್ಟು – ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 55% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
  • ಕಂಪ್ಯೂಟರ್ ಆಪರೇಶನ್ ಮತ್ತು ಅಪ್ಲಿಕೇಶನ್‌ನಲ್ಲಿ ಜ್ಞಾನ ಹೊಂದಿರಬೇಕು.

ವೇತನ ಶ್ರೇಣಿ: ರೂ.16000-29600/- ಮತ್ತು ನಿಯಮಾನುಸಾರ ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ಆರಂಭ : 06.09.2022 ರ ಬೆಳಿಗ್ಗೆ 11.30

ಅರ್ಜಿ ಸಲ್ಲಿಕೆ ಕೊನೆಯ ದಿನ: 30.09.2022 ರ 5.30 ಘಂಟೆ ವರೆಗೆ

ಹೆಚ್ಚಿನ ಮಾಹಿತಿ/ವಿವರಗಳನ್ನು ಬ್ಯಾಂಕಿನ ವೆಬ್‌ಸೈಟ್ www.kccbankdharwad.in ಮೂಲಕ ಪಡೆಯಬಹುದು.

www.kccbankdharwad.in Online Application Apply Online

Telegram Group Join Now
WhatsApp Group Join Now

Leave a Comment

error: Content is protected !!