ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ (Karnataka Lekka Pathra Recruitment 2023) ಯಲ್ಲಿ ಖಾಲಿ ಇರುವ ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (KPSC Recruitment 2023 Notification) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023
KPSC Recruitment 2023 Notification ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 21,400 ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 67
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕಿರಿಯ ಲೆಕ್ಕ ಸಹಾಯಕರು – ಪಿಯುಸಿ ವಾಣಿಜ್ಯ ವಿಭಾಗದಲ್ಲಿ Accountency ಐಚ್ಛಿಕ ವಿಷಯವಾಗಿ ಓದಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35, 38, 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 3 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ 1- 5 ವರ್ಷಗಳು
ವೇತನ ಶ್ರೇಣಿ:
ಕಿರಿಯ ಲೆಕ್ಕ ಸಹಾಯಕರು – 21,400 ರಿಂದ 42,000 ರೂ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-03-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 25-04-2023
KPSC Recruitment 2023 Notification ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kpsc.kar.nic.in