ಕರ್ನಾಟಕ ಲೋಕಸೇವಾ ಆಯೋಗವು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿ (KPSC SDA Eligible Selection List 2022) ಯನ್ನು ಆಗಸ್ಟ್ 26 ಬಿಡುಗಡೆ ಮಾಡಿದೆ.
ಕೆಪಿಎಸ್‌ಸಿಯು 2019-20ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದು ಒಟ್ಟು 1323 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2021 ರ ಸೆಪ್ಟೆಂಬರ್ 18 ಹಾಗೂ 19 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.
2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರ (ಉಳಿಕ ಮೂಲ ವೃಂದ ಮತ್ತು ಹೈ.ಕ.) ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.