ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KPTCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPTCL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)
ವೇತನ ಶ್ರೇಣಿ: 17,000 ರೂ. ರಿಂದ 63,000 ರೂ.
ಹುದ್ದೆಗಳ ಸಂಖ್ಯೆ: 2,975
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಕಿರಿಯ ಸ್ಟೇಷನ್ ಪರಿಚಾರಕ – 433
ಕಿರಿಯ ಪವರ್‌ಮ್ಯಾನ್ – 2542
ಶೈಕ್ಷಣಿಕ ಅರ್ಹತೆ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ 10th ಅಥವಾ 10ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುತ್ತಾರೆ.
ವೇತನ ಶ್ರೇಣಿ:
KPTCL ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 1ನೇ ವರ್ಷ- 17,000 ರೂ. 2ನೇ ವರ್ಷ- 19,000 ರೂ. ಹಾಗೂ 3 ನೇ ವರ್ಷ – 21,000 ರೂ. ಇರುತ್ತದೆ. 3 ವರ್ಷದ ತರಬೇತಿ ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಮಾಸಿಕ 28,550 ರೂ. ರಿಂದ 63,000 ರೂ. ವೇತನ ನೀಡಲಾಗುತ್ತದೆ.
ವಯೋಮಿತಿ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
Cat- 2A, 2B, 3A, 3B ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
SC/ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, Cat-1, Cat -2A, 2B, 3A, 3B ಅಭ್ಯರ್ಥಿಗಳಿಗೆ – 614 ರೂ.
SC/ST ಅಭ್ಯರ್ಥಿಗಳಿಗೆ – 378 ರೂ.
ವಿಕಲಚೇತನ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇದೆ.
KPTCL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-11-2024
ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್’ಲೋಡ್
Non-KK ಅಧಿಸೂಚನೆ: ಡೌನ್’ಲೋಡ್
KK ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kptcl.karnataka.gov.in
ಇತರೆ ಮಾಹಿತಿಗಳನ್ನು ಓದಿ: