KSet Exam Notification 2023: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದ್ದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕೆ-ಸೆಟ್ ಪರೀಕ್ಷೆಗಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 30 ರವರೆಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆ ದಿನವಾಗಿರುತ್ತದೆ. ನವೆಂಬರ್ 26 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ನಡೆಸುತ್ತಿದೆ.
ಪರೀಕ್ಷಾ ಶುಲ್ಕ ಮತ್ತು ಪಾವತಿಸುವ ವಿಧಾನ :
1) ಪರೀಕ್ಷಾ ಶುಲ್ಕ:
GM, II-A, II-B, III-A, III-B ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000/-
ಪ್ರವರ್ಗ- I, SC, ST, PWD ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700/-
2) ಪಾವತಿಸುವ ವಿಧಾನ:
ಶುಲ್ಕವನ್ನು ಕರ್ನಾಟಕದಲ್ಲಿನ ಗಣಕೀಕೃತ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ಪ್ರವರ್ಗ- I, SC, ST, ತೃತೀಯ ಲಿಂಗ ಅಭ್ಯರ್ಥಿಗಳಿಗೆ ಮತ್ತು Medical Certificate with 40% or more disability ಹೊಂದಿರುವ PWD ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
KSet Exam Notification 2023 ಪ್ರಮುಖ ದಿನಾಂಕಗಳು
ಅಧಿಸೂಚನೆ ಹೊರಡಿಸಲಾಗುವ ದಿನಾಂಕ: 11-09-2023
ಮಾಹಿತಿ ಪುಸ್ತಕ ಪ್ರಕಟಿಸಲಾಗುವ ದಿನಾಂಕ: 11-09-2023
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ: 11-09-2023 ರಿಂದ 30-09-2023 ವರೆಗೆ
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-10-2023
K-SET ಪರೀಕ್ಷೆ ದಿನಾಂಕ: 26-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kea.kar.nic.in
ಈ ಮಾಹಿತಿಗಳನ್ನು ಓದಿ:
ಮೆಟ್ರೋ ನೇಮಕಾತಿಯ ಪರಿಷ್ಕೃತ ಕೀ ಉತ್ತರ ಪ್ರಕಟ