KSP Civil PC Recruitment 2022: ಪೊಲೀಸ್ ಇಲಾಖೆ (KSP)ಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛೆಯಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಇಲಾಖೆಯಲ್ಲಿ ಖಾಲಿ ಇರುವ 3400 ಕ್ಕೂ ಅಧಿಕ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದೀಗ ಪೊಲೀಸ್ ಇಲಾಖೆ 1500 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (civil police constable) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಿದ್ದು, ಅಕ್ಟೋಬರ್ 20 ರಿಂದ ನವೆಂಬರ್ 21ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
KSP Civil PC Recruitment 2022
ವಿದ್ಯಾರ್ಹತೆ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 19 ವರ್ಷ ಪೂರೈಸಿರಬೇಕು. ಹಿಂದುಳಿದ ವರ್ಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ವರ್ಗದ ಹಾಗೂ ಇತರೆ ಅಭ್ಯರ್ಥಿಗಳಿಗೆ 25 ವರ್ಷ ಗರಿಷ್ಠ ವಯೋಮಿತಿ ನಿಗದಿ ಪಡಿಸಲಾಗಿದೆ.
ವೇತನ ಶ್ರೇಣಿ : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ವೇತನ ಶ್ರೇಣಿ (Civil PC Salary) ಯು ರೂ.23500-47650 ಇರುತ್ತದೆ.
ನೇಮಕ ವಿಧಾನ : ಸಿವಿಲ್ ಪಿಸಿ ನೇಮಕಾತಿಗೆ ಮೊದಲು ಬಹು ಆಯ್ಕೆ ಮಾದರಿಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ನಡೆಸಿ ತದನಂತರ ವೈದ್ಯಕೀಯ ಪರೀಕ್ಷೆ ಹಾಗೂ ಮೂಲ ದಾಖಲಾತಿ ಪರೀಶಿಲನೆಯನ್ನು ಕೈಗೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ : 400/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ: 200/-
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿರಿ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 20.10.2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21.11.2022 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | 23.11.2022 |
KSP Civil PC Recruitment 2022 ಪ್ರಮುಖ ಲಿಂಕ್ ಗಳು
ನಮ್ಮ Telegram ಗ್ರುಪ್‌ಗೆ Join ಆಗಿ | Join Telegram |
Non HK ಅಧಿಸೂಚನೆ | Download |
HK ಅಧಿಸೂಚನೆ | Download |
Civil police