ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನ | KVLDCL Karnataka Gov In Application 2023 Apply Online

Telegram Group Join Now
WhatsApp Group Join Now

ನಮಸ್ಕಾರ, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಆರಂಭಿಸಲು, ರೈತರಿಗೆ ಸಬ್ಸಿಡಿ ದರದಲ್ಲಿ ಕೊಳವೆ ಬಾವಿ ಕೊರೆಸುವ ಯೋಜನೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ (KVLDCL Karnataka Gov In Application) ಸೇರಿದಂತೆ ಮುಂತಾದ ಸರ್ಕಾರದ ಸಹಾಯಧನ ಯೋಜನೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಉಚಿತ ಕೋಳವೆ ಬಾವಿ, ಶೈಕ್ಷಣಿಕ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ ಸೇರಿದಂತೆ 2023-24ನೇ ಸಾಲಿನಲ್ಲಿ ಈ ಕೇಳಗಿನ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿ‌ ಆಹ್ವಾನಿಸಲಾಗಿದೆ.

KVLDCL Karnataka Gov In Application 2023

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (Veerashaiva Lingayath Abhivrudhi Nigam) ದಿಂದ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜೀವಜಲ ಯೋಜನೆ:
ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ ರೂ. 4.75 ಲಕ್ಷಗಳಲ್ಲಿ ರೂ. 4.25 ಲಕ್ಷಗಳು ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ ರೂ. 3.75 ಲಕ್ಷಗಳಲ್ಲಿ ರೂ.3.25 ಲಕ್ಷ ಸಹಾಯಧನ. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ Farmer’s FRUIT ID ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.

ಕಾಯಕಕಿರಣ ಯೋಜನೆ:
ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20 ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80 ರಷ್ಟು ಗರಿಷ್ಠ ರೂ.80,000/- ಗಳನ್ನು ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಠ ರೂ.30,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.85ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

ಸ್ವಾವಲಂಭಿ ಸಾರಥಿ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ):
ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಫಲಾನುಭವಿಗಳು ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.

ಶೈಕ್ಷಣಿಕ ಸಾಲ ಯೋಜನೆಗಳು:

ಬಸವ ಬೆಳಗು ಯೋಜನೆ (Fresh Students): ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ. 1.00 ಲಕ್ಷಗಳಂತೆ ಕೊರ್ಸ್‌ ಅವಧಿಗೆ ಗರಿಷ್ಠ ರೂ.4.00 ಲಕ್ಷಗಳಿಂದ 5.00 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು CET/NEET ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.

ಬಸವ ಬೆಳಗು ಯೋಜನೆ (Renewals): 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ವಿದೇಶ ವಿದ್ಯಾವಿಕಾಸ ಯೋಜನೆ (Fresh Students): ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬದ ವಾರ್ಷಿಕ ಆದಾಯ ರೂ.8.00 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು QS World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ ಡಿ, ಮಾಸ್ಟರ್ ಡಿಗ್ರಿ ಕೋರ್ಸ್‌ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ.10 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ. 20 ಲಕ್ಷಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

ವಿದೇಶ ವಿದ್ಯಾವಿಕಾಸ ಯೋಜನೆ (Renewals): 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ಭೋಜನಾಲಯ ಕೇಂದ್ರ:
ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ. 40,000/- ಸಹಾಯಧನ ನೆರವು ನೀಡಲಾಗುವುದು. ಹೋಟೆಲ್ ಸ್ಥಾಪನೆ ಮಾಡಲು ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20×30 ಅಡಿ ಅಳತೆಯುಳ್ಳ ನಿವೇಶನ ಹೊಂದಿರಬೇಕು.

ವಿಭೂತಿ ನಿರ್ಮಾಣ ಘಟಕ:
ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸಲು ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ. 4.00 ಲಕ್ಷ ಇದರಲ್ಲಿ ರೂ.3,60,000/- ಸಾಲ ಮತ್ತು ರೂ. 40,000/- ಸಹಾಯಧನ ವಾರ್ಷಿಕ ಶೇ.3% ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ):
ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ / ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಟ ರೂ.1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

KVLDCL Karnataka Gov In Application 2023 ವಿಶೇಷ ಸೂಚನೆ

  • ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್‌ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್‌ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.
  • ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
  • ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
  • ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

KVLDCL Karnataka Gov In Application 2023 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2023
(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

KVLDCL Karnataka Gov In Application 2023 Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ kvldcl.karnataka.gov.in, sevasindhu.karnataka.gov.in

KVLDCL Karnataka Gov In Application 2023: ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ.

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ವಿವಿಧ ಸಹಾಯಧನ ಯೋಜನೆಗಳಿಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

ಕಾಶಿ ಯಾತ್ರೆಗೆ ಸರ್ಕಾರದಿಂದ ಸಹಾಯಧನ

ಸ್ವಂತ ವಾಹನ ಖರೀದಿಸಲು 3 ಲಕ್ಷ ಸಬ್ಸಿಡಿ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

Telegram Group Join Now
WhatsApp Group Join Now

Leave a Comment

error: Content is protected !!