ಎಲ್ಲರಿಗೂ ಸಮಸ್ಕಾರ, ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿವೇತನದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು LIC HFL Vidyadhan Scholarship 2023 ರ ಉಪಯೋಗವನ್ನು ಪಡೆದುಕೊಳ್ಳಿ. ಅರ್ಹತೆ, ಬೇಕಾಗುವ ದಾಖಲೆಗಳು, ಮತ್ತು ಇತರೆ ಮಾಹಿತಿಯನ್ನು ಈ ಕೇಳಗಿನಂತೆ ನೀಡಲಾಗಿದೆ.
LIC HFL ವಿದ್ಯಾಧನ್ ವಿದ್ಯಾರ್ಥಿವೇತನವನ್ನು LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮೂಲಕ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೇರವು ನೀಡಲು ಕೋಡಲಾಗುತ್ತದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವು 11 ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡುತ್ತಿರುವ ಕಡಿಮೆ-ಆದಾಯದ ಗುಂಪಿಗೆ ಸೇರಿದ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.
ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಮಟ್ಟಕ್ಕೆ ಅನುಗುಣವಾಗಿ ರೂ. 25,000 ವರೆಗೆ ಹಣಕಾಸಿನ ನೆರವು ಪಡೆಯಬಹುದಾಗಿದೆ.
LIC HFL Vidyadhan Scholarship 2023
LIC Scholarship 2023 for 10th Passed Students: 10 ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ 11 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಸ್ಕಾಲರ್‌ಶಿಪ್ ಪ್ರಯೋಜ:
15,000 ರೂ. ಸ್ಕಾಲರ್‌ಶಿಪ್ ಪ್ರಯೋಜ ಪಡೆಯಬಹುದು.
LIC HFL Vidyadhan Scholarship 2023 for Degree Students: ಭಾರತದಲ್ಲಿ ಮಾನ್ಯತೆ ಪಡೆದ ಕಾಲೇಜುಗಳು/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ 2023-24 ಶೈಕ್ಷಣಿಕ ಸಾಲಿನಲ್ಲಿ 3 ವರ್ಷದ ಪದವಿ ಕೋರ್ಸ್‌ನಲ್ಲಿ ಮೊದಲ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಸ್ಕಾಲರ್‌ಶಿಪ್ ಪ್ರಯೋಜ:
ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳವರೆಗೆ ವರ್ಷಕ್ಕೆ 25,000 ರೂ. ಸ್ಕಾಲರ್‌ಶಿಪ್ ನೀಡಲಾಗುತ್ತದೆ.
LIC Vidyadhan Scholarship 2023 for Post-Graduation Students: ಭಾರತದಲ್ಲಿ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವ ಮೊದಲ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಸ್ಕಾಲರ್‌ಶಿಪ್:
ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ವರ್ಷಗಳವರೆಗೆ ವರ್ಷಕ್ಕೆ 20,000 ರೂ. ಸ್ಕಾಲರ್‌ಶಿಪ್ ಪ್ರಯೋಜ ಪಡೆಯಬಹುದು.
ಅರ್ಹತೆ:
- ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ವಾರ್ಷಿಕ ರೂ. 3,60,000 ಗಿಂತ ಹೆಚ್ಚಿರಬಾರದು.
ಅಗತ್ಯ ದಾಖಲೆಗಳು:
- ಅರ್ಜಿದಾರರ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
- ಹಿಂದಿನ ತರಗತಿಯ ಮಾರ್ಕ್ ಕಾರ್ಡ್
- ಸರ್ಕಾರ ನೀಡುವ ಗುರುತಿನ ಚೀಟಿ (ಆಧಾರ್ ಕಾರ್ಡ್/ವೋಟರ್ ಐಡಿ/ಚಾಲನಾ ಪರವಾನಗಿ/ಪ್ಯಾನ್ ಕಾರ್ಡ್)
- ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬನಫೈಡ್ ಪ್ರಮಾಣಪತ್ರ)
- ಪ್ರಸಕ್ತ ಶೈಕ್ಷಣಿಕ ವರ್ಷದ ಶುಲ್ಕ ರಶೀದಿ
- ವಿದ್ಯಾರ್ಥಿವೇತನ ಅರ್ಜಿದಾರರ ಬ್ಯಾಂಕ್ (ಕೇವಲ ರಾಷ್ಟ್ರೀಕೃತ ಬ್ಯಾಂಕ್‌ಗಳು) ಖಾತೆ ವಿವರಗಳು. (ರದ್ದಾದ ಚೆಕ್/ಪಾಸ್‌ಬುಕ್ ಪ್ರತಿ) (ಗಮನಿಸಿ: ಗ್ರಾಮೀಣ/ಸಹಕಾರಿ ಬ್ಯಾಂಕ್‌ಗಳನ್ನು ಅನುಮತಿಸಲಾಗುವುದಿಲ್ಲ)
- ಆದಾಯ ಪ್ರಮಾಣಪತ್ರ (Income Certificate)
- ಅಂಗವಿಕಲತೆ ಮತ್ತು ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 30-09-2023
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಇತರೆ ಮಾಹಿತಿಗಳನ್ನು ಓದಿ
ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ