ಎಲ್ಲರಿಗೂ ನಮಸ್ಕಾರ, ರೈತರು ಬೆಳೆದ ಬೆಳೆಗಳಿಗೆ ಕೆಲವೊಂದು ಸಂದರ್ಭಗಳಲ್ಲಿ ಸರಿಯಾದ ಲಾಭ ದೊರೆಯುವುದಿಲ್ಲ. ಅಂತಹ ಸಂದರ್ಭದಲ್ಲಿ ಸರ್ಕಾರವು ನೀಡುವ ಬೆಂಬಲ ಬೆಲೆಯು (MSP Increased) ರೈತರಿಗೆ ಅನುಕೂಲವಾಗುತ್ತದೆ.
ಕೇಂದ್ರ ಸಚಿವ ಸಂಪುಟವು ಖಾರಿಫ್ ಬಿತ್ತನೆ ಅವಧಿಗೆ ಮೊದಲು 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಏರಿಕೆ ಮಾಡಿದೆ. ವೆಚ್ಚದ ಕನಿಷ್ಠ ಶೇ. 50ರಷ್ಟು ಎಂಎಸ್‌ಪಿ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ.
MSP Increased For 14 Crops:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭತ್ತ, ರಾಗಿ, ಸಜ್ಜೆ, ಜೋಳ, ಮೆಕ್ಕೆಜೋಳ ಮತ್ತು ಹತ್ತಿ ಸೇರಿದಂತೆ 14 ಖಾರಿಫ್ ಋತುವಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಇಂದಿನ ಸಚಿವ ಸಂಪುಟದಲ್ಲಿ ರೈತರ ಹಿತದೃಷ್ಟಿಯಿಂದ ಒಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಖಾರಿಫ್ ಹಂಗಾಮು ಆರಂಭವಾಗುತ್ತಿದ್ದು, ಅದಕ್ಕಾಗಿ 14 ಬೆಳೆಗಳಿಗೆ ಎಂಎಸ್‌ಪಿಗೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ.
2024-25ರ ಖಾರಿಫ್ ಬೆಳೆ ಋತುವಿನಲ್ಲಿ ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 117 ರೂಪಾಯಿ ಏರಿಕೆ ಮಾಡಲಾಗಿದ್ದು, 2,300 ರೂ.ಗೆ ಹೆಚ್ಚಿಸಲಾಗಿದೆ.
ಇತರೆ ಮಾಹಿತಿಗಳನ್ನು ಓದಿ:

