New Ration Card Update: ಸರ್ಕಾರ ಜಾರಿಗೆ ತಂದಿರುವ ಗೃಹ ಲಕ್ಷ್ಮಿ ಯೋಜನೆ ಮತ್ತು ಇತರೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಸಾರ್ವಜನಿಕರು ಹೊಸ ಪಡಿತರ ಚೀಟಿ ಪಡೆಯಲು ಕಾತುರದಿಂದ ಕಾಯುತ್ತಿದ್ದರು ಆದರೆ ಈಗ ಅವರಿಗೆ ನಿರಾಶೆ ಎದುರಾಗಿದೆ.
New Ration Card Update
ಹೌದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರೆಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ, ಈ ಗೃಹ ಲಕ್ಷ್ಮಿ ಹಾಗೂ ಇತರೆ ಯೋಜನೆಗಳಿಗಾಗಿ ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, ರಾಜ್ಯದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ವಿತರಿಸುವುದನ್ನು ತಡೆ ಹಿಡಿಯಲಾಗಿತ್ತು.
ಹೊಸ ಸರ್ಕಾರ ಅಧಿಕಾರಕಕ್ಕೆ ಬಂದ ನಂತರ ಹೊಸ ರೇಷನ್ ಕಾರ್ಡ್ ವಿತರಿಸುತ್ತದೆ ಎಂದು ಜನರು ಕಾಯುತ್ತಿದ್ದರು. ಆಹಾರ ಇಲಾಖೆ ಸಚಿವರಾದ ಕೆ ಎಚ್ ಮುನಿಯಪ್ಪ ನವರು ಇಲಾಖೆ ಅಧಿಕಾರಿಗಳಿಗೆ ಹೊಸ BPL, APL ಕಾರ್ಡ್ ವಿತರಿಸಲು ಸೂಚನೆ ನೀಡಿದ್ದರು. ಆದರೆ ಸರ್ಕಾರದಿಂದ ಒಂದು ಹೊಸ ಆದೇಶ ಹೊರಬಿದ್ದಿದೆ.
ಹೊಸ ಪಡಿತರ ಚೀಟಿ ಮಂಜೂರು ಮಾಡಲು ತಡೆ
ಈಗಾಗಲೇ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯನ್ನು ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದ್ದು. ಸರ್ಕಾರದ ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಲಾಗಿದೆ ಎಂದು ಆಹಾರ ಇಲಾಖೆಯಿಂದ ಮಾಹಿತಿ ದೋರೆತಿದೆ.
ಅನ್ನಭಾಗ್ಯ ಯೋಜನೆಯ ಆಗಸ್ಟ್ ತಿಂಗಳ ಹಣ ಬಿಡುಗಡೆ
ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಮಾಡಿರುವ ಮಾಹಿತಿಯನ್ನು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ Aadhar DBT Status ಚೆಕ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸರ್ಕಾರ ಇತರೆ ಯೋಜನೆಗಳು
ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿ, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಿರಿ
✅ರೇಷನ್ ಕಾರ್ಡ್ ತಿದ್ದುಪಡಿ, ಸದಸ್ಯರ ಸೇರ್ಪಡೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್
ಹೊಸ ರೇಷನ್ ಕಾರ್ಡ್ 2023: ಅರ್ಜಿ ಸಲ್ಲಿಸುವವರಿಗೆ ಸರ್ಕಾರದ ಹೊಸ ಆದೇಶ