ಎಲ್ಲರಿಗೂ ನಮಸ್ಕಾರ, PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯಗೆ ಅರ್ಜಿ ಸಲ್ಲಿಸಿದ್ದೀರಾ..? PM ಕಿಸಾನ್ 20 ನೇ ಕಂತಿನ (PM Kisan 20th installment) ಹಣವು ನಿಮ್ಮ ಬ್ಯಾಂಕ್ ಖಾತೆಗೆ ಯಾವಾಗ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ ಓದಿರಿ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡುತ್ತಾರೆ. ಈ ಯೋಜನೆಯ ಹಣವನ್ನು ಸಮಾನ ಕಂತುಗಳಲ್ಲಿ ಪ್ರತಿ 4 ತಿಂಗಳಿಗೊಮ್ಮೆ 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಾರೆ.
PM Kisan 20th installment 2025:
PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿನ ಹಣವನ್ನು ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದಾರೆ. 19 ನೇ ಕಂತಿನ ಹಣವು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು, 20 ನೇ ಕಂತಿನ ಹಣವು ಯಾವಾಗ ಸಂದಾಯವಾಗಲಿದೆ ಎಂದು ಕಾಯುತ್ತಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತಿನ (PM Kisan 20th installment) ಹಣವು ಜೂನ್ ತಿಂಗಳಿನ ಅಂತ್ಯದಲ್ಲಿ ಬರುವ ನಿರೀಕ್ಷೆಯಿದೆ. ಆದರೆ ಸರ್ಕಾರವು ಅಧಿಕೃತ ದಿನಾಂಕವನ್ನು ಇನ್ನು ಘೋಷಣೆ ಮಾಡಿಲ್ಲ.
ಪಿಎಂ ಕಿಸಾನ್ ಯೋಜನೆಗೆ eKYC ಆಗಿದೆಯಾ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂಬುದನ್ನು ನೋಡಿ, ಒಂದು ವೇಳೆ ಆಧಾರ್ ಲಿಂಕ್ ಆಗದಿದ್ದರೆ ಕೂಡಲೇ ಲಿಂಕ್ ಮಾಡಿಸಿಕೊಳ್ಳಬೇಕು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ eKYC ಅನ್ನು PM ಕಿಸಾನ್ ಅಧಿಕೃತ ವೆಬ್‌ಸೈಟ್ ನಲ್ಲಿ ಮಾಡಿಕೊಳ್ಳಬಹುದು. ಅಥವಾ ಫಲಾನುಭವಿಗಳು ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಭೇಟಿ ನೀಡಿ eKYC ಮಾಡಿಸಿಕೊಳ್ಳಬಹುದಾಗಿದೆ.
ಇತರೆ ಮಾಹಿತಿಗಳು:

