ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RCU Notification 2023) ಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RCU Notification 2023 ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ವೇತನ ಶ್ರೇಣಿ: 67,550 ರಿಂದ 1,04,600 ರೂ
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆ ಆರಂಭ: 09-02-2023
ಬೆಳಗಾವಿ ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023
RCU Notification 2023 ಶೈಕ್ಷಣಿಕ ಅರ್ಹತೆ:
ಉಪಕುಲಸಚಿವರು:
1. ಅಂಗೀಕೃತ ಭಾರತೀಯ ಯಾವುದೇ ವಿಶ್ವವಿದ್ಯಾಲಯಗಳಿಂದ ಕನಿಷ್ಠ ದ್ವಿತೀಯ ದರ್ಜೆ ಶ್ರೇಣಿಯಲ್ಲಿ ಪ್ರತಿಶತ ಶೇ. 55% (ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ 5% ರಿಯಾಯತಿ) ದೊಂದಿಗೆ ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರತಕ್ಕದ್ದು ಮತ್ತು ಸರ್ಕಾರಿ ಕಛೇರಿ/ಶಿಕ್ಷಣ ಸಂಸ್ಥೆಯಲ್ಲಿ ಕಡಿಮೆ ಇಲ್ಲದ ಕನಿಷ್ಠ 10 ವರ್ಷಗಳ ಆಡಳಿತಾತ್ಮಕ ಅನುಭವವನ್ನು ಪಡೆದಿರಬೇಕು.
ಅಥವಾ
ಅಂಗೀಕೃತ ಭಾರತೀಯ ಯಾವುದೇ ವಿಶ್ವವಿದ್ಯಾಲಯಗಳಿಂದ ಕನಿಷ್ಠ ದ್ವಿತೀಯ ದರ್ಜೆ ಶ್ರೇಣಿಯಲ್ಲಿ ಪ್ರತಿಶತ ಶೇ. 55% (ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ 5% ರಿಯಾಯತಿ) ದೊಂದಿಗೆ ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರತಕ್ಕದ್ದು ಮತ್ತು ಭಾರತೀಯ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ/ಘಟಕ ಮಹಾವಿದ್ಯಾಲಯ/ ಅನುದಾನಿತ ಮಹಾವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಡಿಮೆ ಇಲ್ಲದ ಕನಿಷ್ಠ 10 ವರ್ಷಗಳ ಸೇವೆಯನ್ನು ಸಲ್ಲಿಸಿದವರಾಗಿರಬೇಕು.
- ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ಕರ್ನಾಟಕ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಇತರೆ ನಿಯಮಗಳು ಅನ್ವಯವಾಗುತ್ತವೆ.
ಸಹಾಯಕ ಕುಲಸಚಿವರು:
1. ಅಂಗೀಕೃತ ಭಾರತೀಯ ಯಾವುದೇ ವಿಶ್ವವಿದ್ಯಾಲಯಗಳಿಂದ ಕನಿಷ್ಠ ದ್ವಿತೀಯ ದರ್ಜೆ ಶ್ರೇಣಿಯಲ್ಲಿ ಪ್ರತಿಶತ ಶೇ. 55% (ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ 5% ರಿಯಾಯತಿ)ದೊಂದಿಗೆ ಸ್ನಾತಕೋತ್ತರ ಪದವಿಯನ್ನು ಉತ್ತೀರ್ಣರಾಗಿರತಕ್ಕದ್ದು ಮತ್ತು ಸರ್ಕಾರಿ ಕಛೇರಿ ಶಿಕ್ಷಣ ಸಂಸ್ಥೆಯಲ್ಲಿ ಬೋಧನೆ ಮಾಡಿದ ಕಡಿಮೆ ಇಲ್ಲದ ಕನಿಷ್ಠ 05 ವರ್ಷಗಳ ಆಡಳಿತಾತ್ಮಕ ಅನುಭವವನ್ನು ಪಡೆದಿರಬೇಕು.
- ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. (ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಕನಿಷ್ಠ 03 ತಿಂಗಳು ತರಬೇತಿ ಪಡೆದ ಪ್ರಮಾಣಪತ್ರ ಅವಶ್ಯಕ).
- ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ಕರ್ನಾಟಕ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಇತರೆ ನಿಯಮಗಳು ಅನ್ವಯವಾಗುತ್ತವೆ.
ಕಛೇರಿ ಅಧೀಕ್ಷಕರು:
- ಅಂಗೀಕೃತ ಭಾರತೀಯ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿಯಲ್ಲಿ ಕನಿಷ್ಠ ದ್ವಿತೀಯ ದರ್ಜೆ ಶ್ರೇಣಿಯಲ್ಲಿ ಪ್ರತಿಶತ ಶೇ. 55% (ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ 5% ರಿಯಾಯತಿ) ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
- ಸರ್ಕಾರಿ ಅಥವಾ ಶೈಕ್ಷಣಿಕ ಸಂಸ್ಥೆಯಲ್ಲಿ ಕನಿಷ್ಠ 03 ವರ್ಷ ಕಡಿಮೆ ಇಲ್ಲದಂತೆ ಕಛೇರಿ ಮೇಲ್ವಿಚಾರಣಾ ಸೇವಾ ಅನುಭವವನ್ನು ಹೊಂದಿರಬೇಕು.
- ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ಕರ್ನಾಟಕ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಇತರೆ ನಿಯಮಗಳು ಅನ್ವಯವಾಗುತ್ತವೆ.
RCU Notification 2023 ವೇತನ ಶ್ರೇಣಿ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ Rani Channamma University – (Belagavi) ದ ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿಯು ಈ ಕೆಳಗಿನಂತೆದೆ
ಉಪಕುಲಸಚಿವರು: 67,550 ರಿಂದ 1,04,600 ರೂ
ಸಹಾಯಕ ಕುಲಸಚಿವರು: 52,650 ರಿಂದ 97,100 ರೂ
ಕಛೇರಿ ಅಧೀಕ್ಷಕರು: 43,100 ರಿಂದ 83,900 ರೂ
ವಯೋಮಿತಿ:
SC/ST/ ಪ್ರವರ್ಗ-I ರಲ್ಲಿ ಬರುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಪ್ರವರ್ಗ-II(a), II(b), III(a), III(b) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು.
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 1000 ರೂ
- SC/ST/ ಪ್ರವರ್ಗ-I ಅಭ್ಯರ್ಥಿಗಳಿಗೆ 500 ರೂ
- ಅಂಗವಿಕಲ ಮತ್ತು ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ಪೂರ್ಣ ವಿನಾಯತಿ ಇರುತ್ತದೆ. (ಅಧಿಕೃತ ಪ್ರಮಾಣಪತ್ರದ ಪ್ರತಿಗಳನ್ನು ಪೂರೈಸಬೇಕು)
- ವಿವರವಾದ ಅಧಿಸೂಚನೆ ವಿವರಗಳನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.rcub.ac.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ನಿಗದಿತ ಅರ್ಜಿ ಶುಲ್ಕವನ್ನು ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ. ಮೂಲಕ ಹಣಕಾಸು ಅಧಿಕಾರಿಗಳು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ವಿದ್ಯಾಸಂಗಮ, ಬೆಳಗಾವಿ-591156 ಇವರ ಹೆಸರಿಗೆ ಪಾವತಿಸಿ, ಡಿ.ಡಿ. ಯನ್ನು ಅರ್ಜಿಯ ಜೊತೆಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿಗಳನ್ನು ಕಳುಹಿಸಿ ಕೊಡುವುದು.
RCU Notification 2023 ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 09-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 02-03-2023
ಅರ್ಜಿ ಸಲ್ಲಿಸುವ ವಿಧಾನ:
ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ವಿದ್ಯಾಸಂಗಮ ಬೆಳಗಾವಿ-591156, ಕರ್ನಾಟಕ ಇವರಿಗೆ ದಿನಾಂಕ: 02-03-2023 ರ ಸಂಜೆ 5.00 ಗಂಟೆಯ ಒಳಗಾಗಿ ನೊಂದಾಯಿತ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಬಂದ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
RCU Recruitment 2023 ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
- ಅರ್ಜಿ ನಮೂನೆ: Download
- ಅಧಿಕೃತ ವೆಬ್‌ಸೈಟ್: www.rcub.ac.in