ಸ್ವಯಂ ಉದ್ಯೋಗ ಯೋಜನೆ: 1 ಲಕ್ಷ ರೂ. ಸಹಾಯಧನ, ಅರ್ಜಿ ಆಹ್ವಾನ | Self Employment Scheme Karnataka 2024 Apply Online @kmdconline.karnataka.gov.in

Telegram Group Join Now
WhatsApp Group Join Now

ನಮಸ್ಕಾರ, ನೀವು ಕೂಡ ಸರ್ಕಾರದಿಂದ 1 ಲಕ್ಷ ರೂ. ಸಹಾಯಧನ ಪಡೆಯಬೇಕಾ? ಹಾಗಾದರೆ Self Employment Scheme and Subsidy ಲೇಖನವನ್ನು ಓದಿ ಸಬ್ಸಿಡಿ ಮಾಹಿತಿಯನ್ನು ಪಡೆಯಿರಿ.

ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ವ್ಯಾಪಾರ, ಸೇವಾ ಕ್ಷೇತ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಓದಗಿಸುವುದಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Self Employment Scheme 2024 ಸಂಕ್ಷಿಪ್ತ ವಿವರ

ಯೋಜನೆಯ ಹೆಸರು: ಸ್ವಯಂ ಉದ್ಯೋಗ ಯೋಜನೆ
ಸಹಾಯಧನ ಮೊತ್ತ: ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1.00 ಲಕ್ಷದ ಸಹಾಯಧನ
ಅರ್ಜಿದಾರರ ವಯಸ್ಸು: 18 ರಿಂದ 55 ವರ್ಷ ವಯೋಮಿತಿ

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಓದಗಿಸಲಾಗುವುದು. ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1 ಲಕ್ಷದ ಸಹಾಯಧನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ನೀಡಲಾಗುತ್ತದೆ.

ಅರ್ಹತೆ:

  1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  2. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು
  4. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ. 81,000/- ಹಾಗೂ ನಗರ ಪ್ರದೇಶದಲ್ಲಿ 1,03,000 ಗಿಂತ ಕಡಿಮೆ ಇರಬೇಕು.
  5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ, ರಾಜ್ಯ ಸರ್ಕಾರಿ, PSU ಉದ್ಯೋಗಿಯಾಗಿರಬಾರದು.
  6. ಅರ್ಜಿದಾರರು KMDC ಯಲ್ಲಿ ಸುಸ್ತಿದಾರರಾಗಿರಬಾರದು

Self Employment Scheme 2024 ದಾಖಲೆಗಳು:

  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ಯೋಜನಾ ವರದಿ

ಆಯ್ಕೆ ಸಮಿತಿ:

  1. ಆಯಾ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರು – ಅಧ್ಯಕ್ಷರು
  2. ತಾಲ್ಲೂಕಿನಲ್ಲಿ ಖಾಯಂ ಆಗಿ ವಾಸಿಸುತ್ತಿರುವ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು – ಸಹ ಅಧ್ಯಕ್ಷರು
  3. ಸಬಂಧಿಸಿದ ತಾಲ್ಲೂಕು ತಹಶೀಲ್ದಾರರು – ಸದಸ್ಯರು
  4. ಕಾರ್ಯನಿರ್ವಾಹಣಾಧಿಕಾರಿ ತಾಲ್ಲೂಕು ಪಂಚಾಯತ್-ಸದಸ್ಯರು
  5. ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ -ಸದಸ್ಯರು
  6. ಜಿಲ್ಲಾ ಜಂಟಿ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ-ಸದಸ್ಯರು
  7. ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಸದಸ್ಯರು
  8. ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ- ಸದಸ್ಯ ಕಾರ್ಯದರ್ಶಿ

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.

Self Employment Scheme 2024 Online Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ kmdc.karnataka.gov.in, kmdconline.karnataka.gov.in

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-02-2024

ಇತರೆ ಮಾಹಿತಿಗಳನ್ನು ಓದಿ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಜಮಾ ಆಗಿದೆ, ನಿಮಗೆ ಬಂತಾ..?

Telegram Group Join Now
WhatsApp Group Join Now

Leave a Comment

error: Content is protected !!