“ಶಕ್ತಿ ಯೋಜನೆ”ಗೆ ಶಕ್ತಿ ತುಂಬಲು ಮಹತ್ವದ ಕ್ರಮ, ಹೆಚ್ಚುವರಿ ಬಸ್ಸುಗಳ ನಿಯೋಜನೆ | Shakti Yojane Karnataka New Updates 2023 Check @sevasindhugs.karnataka.gov.in

Telegram Group Join Now
WhatsApp Group Join Now

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ಶಕ್ತಿ ಯೋಜನೆ (Shakti Yojane Karnataka) ಗೆ ಭಾರಿ ಪ್ರಮಾಣದ ಸ್ಪಂದನೆ ಸಿಗುತ್ತಿದ್ದು, ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಲಾಭ ಪಡೆದುಕೊಳ್ಳುತ್ತಿದ್ದಾರೆ. ಈ ಯೋಜನೆಯನ್ನು ಸುಗಮವಾಗಿ ನಡೆಸಲು ಸಾರಿಗೆ ಮತ್ತು ಮುಜರಾಯಿ ಸಚಿವರ ಸೂಚನೆಯ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ಕೆಲವು ಬದಲಾವಣೆಗಳನ್ನು ತರಲು ನಿರ್ಧರಿಸಿದ್ದಾರೆ ಎಂದು ಕೆಎಸ್’ಆರ್’ಟಿಸಿ ತಿಳಿಸಿದೆ.

ಶಕ್ತಿ ಉಚಿತ ಬಸ್ ಯೋಜನೆಯಿಂದಾಗಿ ದೇವಾಲಯಗಳು ಹಾಗು ಪ್ರವಾಸಿ ತಾಣಗಳಲ್ಲಿ ಜನದಟ್ಟನೆಯನ್ನು ಹಾಗೂ ಕೆಲವೊಂದು ಕಡೆಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಆಗುತ್ತಿವೆ ಅದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಿಗಮದ ಎಲ್ಲಾ 16 ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು ಹಾಗೂ 83 ಘಟಕ ವ್ಯವಸ್ಯಾಪಕರುಗಳೊಂದಿಗೆ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ವಿಡಿಯೋ ಸಂವಾದ ನಡೆಸಿ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಕೂಲಂಕುಷ ಚರ್ಚೆ ನಡೆಸಿದ್ದಾರೆ.

“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್‌ ಅರ್ಜಿ

ಶಕ್ತಿ ಯೋಜನೆ (Shakti Yojane Karnataka) ಸುಗಮ ನಡೆಸಲು ಸೂಕ್ತಕ್ರಮ

ಸರ್ಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆ (Shakti Yojane Karnataka) ಯನ್ನು ವ್ಯವಸ್ಥಿತವಾಗಿ ನಡೆಸಲು ವಿವಿಧ ವಿಭಾಗಗಳ ವ್ಯಾಪ್ತಿಯಲ್ಲಿ ಜನಸಂದಣಿ ಹೆಚ್ಚಿರುವ 10 ಸ್ಥಳಗಳನ್ನು ವಿಶೇಷ ಜಾತ್ರೆ/ ಹಬ್ಬವಿರುವ ದಿನಗಳನ್ನು ಗುರುತಿಸಿ, ಪ್ರಯಾಣಿಕರ ಸಂದಣಿ ಅನುಗುಣವಾಗಿ ಘಟಕಗಳಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಟಿಕೆಟ್ ವಿತರಣೆ, ಗುರುತಿಸಿರುವ ಸ್ಥಳಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವಾಗುವ ನಿಟ್ಟಿನಲ್ಲಿ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಯಾವುದೇ ಕಾರಣಕ್ಕೂ ಬಸ್ಸುಗಳ ನಿಯೋಜನೆ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಕ್ಕೆ ಅವಕಾಶ ಕೊಡಬಾರದು ಹಾಗೂ ನಿಗಮದ ಚಾಲನಾ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ಪ್ರೋತ್ಸಾಹಿಸಬೇಕು. ಕೇಂದ್ರ ಕಛೇರಿಯ ಹಿರಿಯ ಅಧಿಕಾರಿಗಳು/ ಉಸ್ತುವಾರಿ ಅಧಿಕಾರಿಗಳು ಪ್ರತಿ ವಾರ ತಮ್ಮದೇ ವಿಭಾಗಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಲು ಸೂಚಿಸಲಾಗಿದೆ. ಅದೇ ರೀತಿ ವಿದ್ಯಾರ್ಥಿಗಳಿಗೂ ತೊಂದರೆ ಆಗದಂತೆ ಬಸ್ಸುಗಳ ಹೆಚ್ಚುವರಿ ಟ್ರಿಪ್ ಗಳನ್ನು ಕಾರ್ಯಾಚರಣೆ ಮಾಡುವಂತೆ ಸೂಚಿಸಿದರು.
ಸಾರ್ವಜನಿಕರು ಸಹ ನಿಗಮದೊಂದಿಗೆ ಕೈಜೋಡಿಸಿ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಹಕರಿಸುವಂತೆ KSRTC ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸರ್ಕಾರ ಇತರೆ ಯೋಜನೆಗಳು

ಗೃಹ ಲಕ್ಷ್ಮೀ” ಸೇವಾ ಸಿಂಧು ಆನ್‌ಲೈನ್‌ ಅರ್ಜಿ


Telegram Group Join Now
WhatsApp Group Join Now

Leave a Comment

error: Content is protected !!