ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ SSP Scholarship 2023 For OBC ಲೇಖನವನ್ನು ಓದಿ. ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಇಲಾಖೆಯು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆ ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
SSP Scholarship 2023 For OBC
ವಿದ್ಯಾರ್ಥಿವೇತನ ಹೆಸರು: ಮೆಟ್ರಿಕ್-ನಂತರದ ಕೋರ್ಸುಗಳ ವಿದ್ಯಾರ್ಥಿವೇತನ
ಇಲಾಖೆ ಹೆಸರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಂದುವರಿಸಲು ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಯಾರು ಅರ್ಜಿ ಸಲ್ಲಿಸಬಹುದು?
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಹಾಗೂ ಅರೆಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಯೋಜನಗಳು:
“ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಇವು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಲಾಗಿದೆ.
ಅಗತ್ಯ ದಾಖಲೆಗಳು:
- ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
- ಮೊಬೈಲ್ ಸಂಖ್ಯೆ
- ಇ-ಮೇಲ್ ಐ.ಡಿ.
- ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
- ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)
How To Apply SSP OBC Scholarship 2023
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲೆಗೊಂದಿಗೆ ಈ ಪೋರ್ಟಲ್ https://ssp.postmatric.karnataka.gov.in ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿಗಳನ್ನು ಸಲ್ಲಿಸಬಹುದು.
OBC SSP Scholarship 2023 Last Date: 15-02-2024
SSP Scholarship 2023 For OBC ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: https://bcwd.karnataka.gov.in
ಇಲಾಖಾ ಸಹಾಯವಾಣಿ: 8050770005
ಇಮೇಲ್: [email protected]
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected]
ದೂರವಾಣಿ ಸಂಖ್ಯೆ: 1902
ಇತರೆ ಮಾಹಿತಿಗಳನ್ನು ಓದಿ
SSP ಮೇಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Very good news about this new job posting thanks 😊 to siri