ಸ್ವಯಂ ಉದ್ಯೋಗಕ್ಕಾಗಿ ಸರ್ಕಾರದಿಂದ ಸಹಾಯಧನ | Udyogini Scheme Karnataka 2023 Apply Online @kswdc.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಸರ್ಕಾರದಿಂದ ನೀಡಲಾಗುವ ಸಹಾಯಧನ ಪಡೆಯಬೇಕೆ? ನಾವೂ ಈ ಲೇಖನದಲ್ಲಿ Udyogini Scheme Karnataka 2023 ಅರ್ಜಿ ಆಹ್ವಾನಿಸಿರುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಲೇಖನವನ್ನು ಓದಿ ಅರ್ಹ ಫಲಾನುಭವಿಗಳು ಉದ್ಯೋಗಿನಿ ಮತ್ತು ಇತರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.

ಮಹಿಳೆಯರು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಸರ್ಕಾರ ಸಹಾಯಧನ ನೀಡುತ್ತದೆ. ಮಹಿಳೆಯರ ಆರ್ಥಿಕವಾಗಿ ಸಬಲೀಕರಣ ಹೊಂದಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಅದರಲ್ಲಿ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಇತರೆ ಯೋಜನೆಗಳಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Udyogini Scheme Karnataka 2023

ಯೋಜನೆ ಹೆಸರು: ಉದ್ಯೋಗಿನಿ ಮತ್ತು ಇತರೆ ಯೋಜನೆಗಳು
ಸಹಾಯಧನ ಮೊತ್ತ: ಶೇ. 30 ರಷ್ಟು ಮತ್ತು ಶೇ. 50 ರಷ್ಟು ಸಹಾಯಧನ
ಘಟಕ ವೆಚ್ಚ: ಗರಿಷ್ಟ 3 ರೂ. ಲಕ್ಷ

ಉದ್ಯೋಗಿನಿ ಯೋಜನೆ:
ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡುತ್ತಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
ಆದಾಯ ಮಿತಿ: ರೂ. 2 ಲಕ್ಷಗಳು ಮೀರಿರಬಾರದು
ಘಟಕ ವೆಚ್ಚ : ಕನಿಷ್ಟ ರೂ. 1 ಲಕ್ಷ ದಿಂದ ಗರಿಷ್ಟ ರೂ. 3 ಲಕ್ಷಗಳು
ಸಹಾಯಧನ ಶೇ. 50 ರಷ್ಟು

ಸಾಮಾನ್ಯ ವರ್ಗ:
ಆದಾಯ ಮಿತಿ: ರೂ. 1.50 ಲಕ್ಷಗಳು
ಘಟಕ ವೆಚ್ಚ: ಗರಿಷ್ಟ ರೂ. 3 ಲಕ್ಷಗಳು
ಸಹಾಯಧನ ಶೇ.30 ರಷ್ಟು

ವಯೋಮಿತಿ: ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಟ 18 ರಿಂದ 55 ವರ್ಷಗಳ ಒಳಗಿನವರಾಗಿರಬೇಕು.

ಇತರೆ ಯೋಜನೆಗಳು

ಚೇತನ ಯೋಜನೆChetana Scheme:
ದಮನಿತ ಮಹಿಳೆಯರಿಗೆ ಅದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಈ ಯೋಜನೆಗೆ ವಯೋಮಿತಿ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.

ಧನಶ್ರೀ ಯೋಜನೆ-Dhanashree Scheme:
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ: 1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ವಿಶೇಷ ಸೂಚನೆ:

  • ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
  • ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
  • ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka. gov.in ನಲ್ಲಿ ಲಭ್ಯವಿರುತ್ತದೆ.
  • ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು,
  • ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಸಂಪರ್ಕಿಸುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-12-2023 ರ ಸಂಜೆ 5.30ರವರೆಗೆ

Udyogini Scheme Karnataka 2023 ಪ್ರಮುಖ ದಿನಾಂಕ:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ sevasindhu.karnataka.gov.in, kswdc.karnataka.gov.in

ಕಛೇರಿ ವಿಳಾಸ:
6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು- 560 011, ದೂರವಾಣಿ: 080-26632973/26542307

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗ ಯೋಜನೆ 2023

Telegram Group Join Now
WhatsApp Group Join Now

Leave a Comment

error: Content is protected !!