ನಮಸ್ಕಾರ, ನೀವು ಚಾಲಕರಾಗಿದ್ದೀರಾ? ಸ್ವಂತ ವಾಹನ ಕೊಂಡುಕೊಳ್ಳುವ ಬಹಯಕೆ ಇದೆಯಾ? ಹಾಗಿದ್ದರೆ ನಿಮಗಾಗಿ ಕರ್ನಾಟಕ ಸರ್ಕಾರ ನೀಡುವ ವಾಹನ ಸಬ್ಸಿಡಿ ಯೋಜನೆ (Vehicle Subsidy Scheme Karnataka) ಯ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣವಾಗಿ ಓದಿ ಯೋಜನೆಯ ಸೌಲಭ್ಯ ಪಡೆಯಿರಿ.
ಹೌದು ಸ್ನೇಹಿತರೇ, ನೀರುದ್ಯೋಗ ಸಮಸ್ಯೆಯಿಂದಾಗಿ ಅನೇಕ ಯುಜನರ ಬದುಕು ಮಂಕಾಗಿದೆ. ನಿರುದ್ಯೋಗಿಗಳಿಗಾಗಿ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸುತ್ತವೆ. ಅದಲ್ಲಿ ಸ್ವಾವಲಂಭಿ ಸಾರಥಿ ಯೋಜನೆ (Swavalambi Sarathi Karnataka) ಯು ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೂ. 3 ಲಕ್ಷಗಳವರೆಗೆ ಸಹಾಯಧನ ನೀಡಲಾಗುತ್ತದೆ. ಸ್ವಾವಲಂಬಿ ಸಾರಥಿ ಯೋಜನೆಗಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಹತೆ, ಬೇಕಾಗುವ ದಾಖಲೆಗಳು, ಮತ್ತು ಇತರೆ ಮಾಹಿತಿ ಈ ಕೇಳಗಿನಂತಿದೆ.
Vehicle Subsidy Scheme Karnataka 2025 ಮಾಹಿತಿ:
ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಮೊತ್ತ: ಗರಿಷ್ಠ ರೂ. 3 ಲಕ್ಷದ ವರೆಗೆ ಅಥವಾ ಶೇ 50 ರಷ್ಟು ಸಹಾಯಧನ ನೀಡುತ್ತಾರೆ.
ಅರ್ಜಿದಾರರ ವಯಸ್ಸು: 21 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರು
2025-26 ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಸ್ವಾವಲಂಬಿ ಸಾರಥಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು. ಈ ಯೋಜನೆಯ ಅಡಿಯಲ್ಲಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಸದರಿ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ತಿಳಿಸಿದೆ.
Vehicle Subsidy Scheme Karnataka ಅರ್ಹತೆಗಳು:
- ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.
- ಅರ್ಜಿದಾರರು ಕರ್ನಾಟಕದ ಶಾಶ್ವತ ನಿವಾಸಿ ಆಗಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
- ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬ ಆದಾಯ ರೂ. 6,00,000/- ಕ್ಕಿಂತ ಕಡಿಮೆ ಇರಬೇಕು.
- ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಿರಬಾರದು.
- ಕಳೆದ 5 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವರ ಕುಟುಂಬದ ಸದಸ್ಯರು ಸರ್ಕಾರ ಅಥವಾ ನಿಗಮದ ಇತರ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ).
Vehicle Subsidy Scheme Karnataka ದಾಖಲೆಗಳು:
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆಗಾಗಿ)
- ವಾಹನ ಚಾಲನಾ ಪರವಾನಗಿ ಪ್ರತಿ
- ಬ್ಯಾಂಕ್ ಪಾಸ್‌ಬುಕ್ ಪ್ರತಿ
- ವಾಹನದ ಅಂದಾಜು ದರಪಟ್ಟಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ (ಮತ್ತೊಮ್ಮೆ ಉಲ್ಲೇಖಿಸಲಾಗಿದೆ – ಒಂದು ಬಾರಿ ಸಾಕು, ಆದರೆ ಸರ್ಕಾರದ ಸೂಚನೆಯ ಪ್ರಕಾರವೇ ಸಲ್ಲಿಸಬೇಕು)
- ಸ್ವಯಂ ಘೋಷಣೆ ಪತ್ರ
Vehicle Subsidy Scheme Karnataka ಅರ್ಜಿ ಸಲ್ಲಿಸುವುದು ಹೇಗೆ?
ಸ್ವಾವಲಂಬಿ ಸಾರಥಿ ಯೋಜನೆಯ ಅರ್ಜಿಗಳನ್ನು kmdconline.karnataka.gov.in ಮೂಲಕ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.
Swavalambi Sarathi Yojana Karnataka Application 2025:
ಆನ್‌ಲೈನ್ ಅರ್ಜಿ: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್‌ಸೈಟ್: kmdconline.karnataka.gov.in, kmdc.karnataka.gov.in
kmcdc.karnataka.gov.in ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-10-2025
ಇತರೆ ಮಾಹಿತಿಗಳನ್ನು ಓದಿ

