ಪಶುಪಾಲನಾ ಇಲಾಖೆ ನೇಮಕಾತಿ ಅಧಿಸೂಚನೆ 2022 | Veterinary Assistant Recruitment 2022 Notification

Telegram Group Join Now
WhatsApp Group Join Now

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ ನೇಮಕಾತಿಗೆ (Veterinary Assistant Recruitment 2022) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.

Veterinary Assistant Recruitment 2022 Notification

ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 05-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04-11-2022
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 06-10-2022

ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.750.

ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500.

ವಿದ್ಯಾರ್ಹತೆ
ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ / ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ (ಜೆ.ಒ.ಸಿ ಡೈರಿ / (ಪೌಲ್ಟ್ರಿ) ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.

ನೇಮಕ ವಿಧಾನ
ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆ
100 ಅಂಕಗಳಿಗೆ 100 ಪ್ರಶ್ನೆಗಳ ಒಂದು ಲಿಖಿತ ಪ್ರಶ್ನೆ ಪತ್ರಿಕೆ ಇರುತ್ತದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. ತಪ್ಪು ಉತ್ತರಕ್ಕೆ 1/4 ಅಂಕಗಳನ್ನು ಕಳೆಯಲಾಗುತ್ತದೆ.

ವೇತನ ಶ್ರೇಣಿ: ರೂ.21,400 – 42,000.

ಅರ್ಜಿ ಸಲ್ಲಿಕೆಗೆ ಲಿಂಕ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 26 ರಂದು ಬಿಡುಗಡೆ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ನೋಟಿಫಿಕೇಶನ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿ ಓದಿರಿ.

Notification Download

Veterinary Assistant Recruitment 2022 ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಮೊದಲನೇ ಹಂತ: ಅಪ್ಲಿಕೇಶನ್‌ ಸಬ್‌ಮಿಷನ್‌
ಎರಡನೇ ಹಂತ: ಫೋಟೋ ಮತ್ತು ಹೆಬ್ಬೆರಳು ಇಂಪ್ರೆಷನ್ ಅಪ್‌ಲೋಡ್‌ ಮಾಡುವುದು.
ಮೂರನೇ ಹಂತ: ಶುಲ್ಕ ಪಾವತಿ ಮಾಡುವುದು.
ನಾಲ್ಕನೇ ಹಂತ: ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳುವುದು

Telegram Group Join Now
WhatsApp Group Join Now

Leave a Comment

error: Content is protected !!