2018 ರ ಡಿಸೆಂಬರ್ 1 ರಂದು ಈ ಯೋಜನೆಯನ್ನು ಆರಂಭಿಸಲಾಗಿದ್ದು, 2 ಹೆಕ್ಟೇರ್ ತನಕ ಒಟ್ಟಾರೆಯಾಗಿ ಭೂಮಿ ಇರುವ ಅಥವಾ ಮಾಲೀಕತ್ವ ಹೊಂದಿರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂ. ನೀಡಲಾಗುತ್ತದೆ.
ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡುತ್ತದೆ.