ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶು ವೈದ್ಯಕೀಯ ಸಹಾಯಕರು ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಪ್ರಕಟಿಸಿದೆ.
ಆಸಕ್ತ ಹಾಗೂ ಅರ್ಹ ಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ
100 ಪ್ರಶ್ನೆಗಳ ಒಂದು ಲಿಖಿತ ಪ್ರಶ್ನೆ ಪತ್ರಿಕೆ ಇರುತ್ತದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. ತಪ್ಪು ಉತ್ತರಕ್ಕೆ 1/4 ಅಂಕಗಳನ್ನು ಕಳೆಯಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ
ವೇತನ ಶ್ರೇಣಿ: ರೂ.21,400 - 42,000.
ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.
ನೇಮಕ ವಿಧಾನ
ಅರ್ಜಿ ಸಲ್ಲಿಕೆಗೆ ಲಿಂಕ್ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ನೋಟಿಫಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ ಓದಿರಿ.