ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ನಡವಳಿಗಳನ್ನು ಪ್ರಕಟಿಸಿದೆ
ಕೋವಿಡ್ -19 ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಠಿಯಿಂದ 2020-21 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು
ಪರೀಕ್ಷೆಯನ್ನು ಬರೆಯದೆ ಶೇಕಡ 100ಕ್ಕೆ 100ರಷ್ಟು ಅಂಕಗಳನ್ನು ಪಡೆದವರಾಗಿದ್ದು ಅವರುಗಳೇ ಆಯ್ಕೆಯಾಗುವುದರಿಂದ 2019-20ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಬರೆದು ಪಾಸಾದ ಅಭ್ಯರ್ಥಿಗಳಿಗೆ ಅನ್ಯಾಯವಾಗಿತ್ತು
ಹಲವಾರು ಜಿಲ್ಲೆಗಳಿಂದ ನೇಮಕಾತಿ ಬಯಸಿರುವ ಅಭ್ಯರ್ಥಿಗಳಿಂದ ಆಕ್ಷೇಪಣೆಗಳು ವ್ಯಕ್ತವಾಗಿದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳಲು ಸಲಹಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ.
ಹಿಚ್ಚಿನ ಮಾಹಿತಿಗಾಗಿ ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ